ಮೈಸೂರು: ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಮುನಿರತ್ನ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್ಐಟಿಗೆ ವಹಿಸಬೇಕು ಎಂದು ಒಕ್ಕಲಿಗ ಸಚಿವರು ಹಾಗೂ ಶಾಸಕರು ಇಂದು ತಮ್ಮನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಎಂದರು.