ಕೊಪ್ಪಳ : GST ಜಾರಿ ಮಾಡಿದ ಪರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು GST ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್ ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15ನೇ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ ಎಂದರು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.