image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹಾಸನೆಂಬೆ ದೇವಸ್ಥಾನದ ಗರ್ಭಗುಡಿ ಬಾಗಿಲು ಓಪನ್ : ಸಚಿವ ಕೃಷ್ಣ ಭೈರೇಗೌಡ ಸೇರಿ ಹಲವು ಗಣ್ಯರು ಭಾಗಿ

ಹಾಸನೆಂಬೆ ದೇವಸ್ಥಾನದ ಗರ್ಭಗುಡಿ ಬಾಗಿಲು ಓಪನ್ : ಸಚಿವ ಕೃಷ್ಣ ಭೈರೇಗೌಡ ಸೇರಿ ಹಲವು ಗಣ್ಯರು ಭಾಗಿ

ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರು ಮುತ್ತೈದೆಯರ ಜೊತೆಗೆ ಪೂಜಾ ಸಾಮಗ್ರಿಗಳನ್ನು ತಂದಿದ್ದಾರೆ. ಅರ್ಚಕರಿಂದ ಪೂಜೆ ನೆರವೇರಿಸಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಈ ವೇಳೆ ಆಡಿ ಚುಂಚನಗಿರಿ ಮಠದ. ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. 

Category
ಕರಾವಳಿ ತರಂಗಿಣಿ