image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದಕ್ಷಿಣ ಭಾರತದಲ್ಲಿ ಅ.18ರವರೆಗೂ ಭಾರಿ ಮಳೆ': ಹವಾಮಾನ ಇಲಾಖೆ ಮುಂನ್ಸೂಚನೆ

ದಕ್ಷಿಣ ಭಾರತದಲ್ಲಿ ಅ.18ರವರೆಗೂ ಭಾರಿ ಮಳೆ': ಹವಾಮಾನ ಇಲಾಖೆ ಮುಂನ್ಸೂಚನೆ

ಬೆಂಗಳೂರು: ಮಾನ್ಸೂನ್ ಮಾರುತಗಳ ನಿರ್ಗಮನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂತೆಯೇ ಈ ಅವಧಿಯಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ನೈರುತ್ಯ ಮುಂಗಾರು ಕೊನೆಗೊಳ್ಳುವ ಮನ್ಸೂಚನೆಯೂ ಇದ್ದು, ಹೀಗಾಗಿ ಕೇಂದ್ರ ಮತ್ತು ಪೂರ್ವ ಭಾರತದ ಹಲವೆಡೆ ಮಳೆಯಾಗಲಿದೆ ಎಂದಿದೆ.

Category
ಕರಾವಳಿ ತರಂಗಿಣಿ