image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೃಷಿ ಪಂಪ್‌ಸೆಟ್​​ಗೆ ಆಧಾರ್ ಲಿಂಕ್ ಮಾಡದವರಿಗೆ ಸಹಾಯಧನ ಕಡಿತ ಆಗಲ್ಲ: ಸಚಿವ ಕೆ.ಜೆ.ಜಾರ್ಜ್

ಕೃಷಿ ಪಂಪ್‌ಸೆಟ್​​ಗೆ ಆಧಾರ್ ಲಿಂಕ್ ಮಾಡದವರಿಗೆ ಸಹಾಯಧನ ಕಡಿತ ಆಗಲ್ಲ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಒಟ್ಟು 34 ಲಕ್ಷ ಕೃಷಿ ಪಂಪ್‌ಸೆಟ್​​ಗಳಿವೆ. ಈ ಪೈಕಿ 32 ಲಕ್ಷ ಪಂಪ್‌ಸೆಟ್​​ಗೆ ಆಧಾರ್ ಲಿಂಕ್ ಆಗಿದೆ. ಇದರಿಂದ ಎಷ್ಟು ಸಬ್ಸಿಡಿ ಕೊಡಲಾಗುತ್ತಿದೆ ಎಂಬ ಲೆಕ್ಕ ಹಾಗು ನಿಜವಾದವರಿಗೇ ಸಹಾಯಧನ ಹೋಗುತ್ತಿದೆಯೇ ಎಂಬ ಮಾಹಿತಿ ದೊರೆಯುತ್ತದೆ. ಆಧಾರ್ ಲಿಂಕ್ ಮಾಡದೇ ಇರುವವರಿಗೆ ಏನು ಮಾಡಬೇಕು ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.‌

ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸಹಾಯಧನ ಕಡಿತ ಬಗೆಗಿನ ಆತಂಕದ ವಿಚಾರವಾಗಿ ಪ್ರತಿಕ್ರಿಯಿಸಿ, ಈಗಾಗಲೇ ಶೇ 95.4ರಷ್ಟು ಪಂಪ್‌ಸೆಟ್​​ಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಸುಮಾರು ಶೇ 6ರಷ್ಟು ಮಾತ್ರ ಮಾಡಿಲ್ಲ. ಲಿಂಕ್ ಮಾಡದೇ ಇರುವವರಿಗೆ ಏನು ಮಾಡಬೇಕು ಎಂಬುದನ್ನು ಪರಿಶೀಲಿಸುತ್ತೇವೆ. ಅವರಿಗೆ ಸಹಾಯಧನ ಕಡಿತ ಮಾಡುವ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ. ಆಧಾರ್ ಲಿಂಕ್ ಮಾಡುವ ಮೂಲಕ ದುರ್ಬಳಕೆ ಆಗುವುದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆಧಾರ್ ಜೋಡಣೆ ಬಗ್ಗೆ ರೈತರು ತಪ್ಪಾಗಿ ಅರ್ಥೈಸಿಕೊಳ್ಳುವುದು ಬೇಡ ಎಂದು ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ