image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗೃಹ ಸಚಿವರಿಂದಲೇ ಬೆಟ್ಟಿಂಗ್ : ಭಾರಿ ಟೀಕೆ

ಗೃಹ ಸಚಿವರಿಂದಲೇ ಬೆಟ್ಟಿಂಗ್ : ಭಾರಿ ಟೀಕೆ

ತುಮಕೂರು: ಬೆಟ್ಟಿಂಗ್‌, ಸ್ಮಗ್ಲಿಂಗ್‌ ಸೇರಿ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಗೃಹ ಸಚಿವರೇ ಬೆಟ್ಟಿಂಗ್ ಕಟ್ಟುವ ಮೂಲಕ ಭಾರಿ ಟೀಕೆಗೆ ಗುರಿಯಾಗಿದ್ದಾರೆ. ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೀಕ್ಷಿಸಲು ಆಗಮಿಸಿದ್ದ ಗೃಹ ಸಚಿವ ಪರಮೇಶ್ವರ್‌ ಅವರು, ಡಿಸಿ ಜತೆ ಬೆಟ್ಟಿಂಗ್ ಕಟ್ಟಿ 500 ರೂ. ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಅವರು ತಮಾಷೆಗೆ ಬೆಟ್ಟಿಂಗ್‌ ಕಟ್ಟಿದ್ದರೂ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಫೈನಲ್‌ ಪಂದ್ಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಬೆಟ್ಟಿಂಗ್ ವಿಷಯವನ್ನು ಬಹಿರಂಗಪಡಿಸಿದರು. ವಿಜೇತ ತಂಡಕ್ಕೆ ಬಹುಮಾನ ವಿತರಿಸಿದ ನಂತರ ಪರಮೇಶ್ವರ್ ಅವರು ಮಾತನಾಡಿ, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದು, ಇದರಿಂದ ಭಾರಿ ಟೀಕೆಗೆ ಗುರಿಯಾಗಿದ್ದಾರೆ.

Category
ಕರಾವಳಿ ತರಂಗಿಣಿ