image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ ಅನುಮತಿ ಪ್ರಶ್ನಿಸಿದ್ದ ಸಿಎಂ ಅರ್ಜಿ ವಜಾ

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ ಅನುಮತಿ ಪ್ರಶ್ನಿಸಿದ್ದ ಸಿಎಂ ಅರ್ಜಿ ವಜಾ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿಯಮ ಬಾಹಿರವಾಗಿ ನಿವೇಶನಗಳನ್ನು ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆದೇಶದ ವಿಸ್ತೃತವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದರು. ರಾಜ್ಯಪಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ. ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದರು.

Category
ಕರಾವಳಿ ತರಂಗಿಣಿ