image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಲಬುರಗಿ ಜಿಲ್ಲೆಗೆ 243 ಕೋ.ರೂ ಮಧ್ಯಂತರ ಬೆಳೆ ವಿಮೆ ಮಂಜೂರು

ಕಲಬುರಗಿ ಜಿಲ್ಲೆಗೆ 243 ಕೋ.ರೂ ಮಧ್ಯಂತರ ಬೆಳೆ ವಿಮೆ ಮಂಜೂರು

ಕಲಬುರಗಿ: ಅತಿವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆಗಳೆಲ್ಲ ಸಂಪೂರ್ಣ ಹಾನಿಯಾಗಿದ್ದರಿಂದ ರೈತರ ನೆರವಿಗೆ ಬರುವ ನಿಟ್ಟಿನಲ್ಲಿ 243 ಕೋಟಿ ರೂ ಬೆಳೆ ವಿಮೆ ಮಂಜೂರಾತಿಯಾಗಿರುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿಯ ಕುರಿತಾಗಿ ಸಿಎಂ ಹಾಗೂ ತಾವೆಲ್ಲರೂ ವೀಕ್ಷಿಸುವ ಜತೆಗೆ ಎನ್ ಡಿಆರ್ ಎಫ್- ಎಸ್ ಡಿಆರ್ ಎಫ್ ನಿಯಮಾವಳಿ ಪ್ರಕಾರ ಬೆಳೆ ಹಾನಿ ವರದಿ ರೂಪಿಸಿದ್ದರ ಹಿನ್ನೆಲೆಯಲ್ಲಿ ಜತೆಗೆ ಸರ್ಕಾರದ ನಿರ್ದೇಶನ ಮೇರೆಗೆ ಮಧ್ಯಂತರ ಬೆಳೆವಿಮೆ ಪರಿಹಾರ ಮಂಜೂರಾತಿಯಾಗಿದ್ದು, ಮೂರು ವಾರದೊಳಗೆ ರೈತರ ಖಾತೆಗೆ ಜಮಾ ಆಗಲಿದೆ ಎಂದು ವಿವರಣೆ ನೀಡಿದರು.‌ ಕಳೆದೆರಡು ವರ್ಷದ ಹಿಂದೆಯೂ ಮಧ್ಯಂತರ ಬೆಳೆವಿಮೆ ಪರಿಹಾರ ಬಿಡುಗಡೆಯಾಗಿತ್ತು. ಈ ವರ್ಷ ಸಹ ಬಿಡುಗಡೆಯಾಗುತ್ತಿದೆ. ಇದು ಸರ್ಕಾರದ ಬದ್ದತೆ ತೋರಿಸುತ್ತದೆ ಎಂದರು.‌ ಆಗಸ್ಟ್ ತಿಂಗಳಿನಲ್ಲಿ ಶೇ.69 ಹೆಚ್ಚುವರಿ ಹಾಗೂ ಸೆಪ್ಟೆಂಬರ್ ಶೇ.63 ಹೆಚ್ಚುವರಿಯಾಗಿ ಸತತ ಸುರಿದ ಮಳೆಯಿಂದಾಗಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯ ಅನುಸಾರ 3,24,205 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿರುತ್ತದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿರುತ್ತದೆ. ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವರು ಹೇಳಿದರು.

Category
ಕರಾವಳಿ ತರಂಗಿಣಿ