ಬೆಂಗಳೂರು : ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳುಗಟ್ಟಲೆ ನಿಲ್ಲಿಸಿರುವ ವಾಹನಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ವಾಹನ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿಕೊಂಡಿದ್ದರೂ ಜನ ತಲೆ ಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ಇಂತಹ ತೀರ್ಮಾನ ಕೈಗೊಂಡಿದ್ದೇವೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ರಸ್ತೆ ಬದಿ ವಾಹನ ನಿಲ್ಲಿಸಿರುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಂಚಾರ ಪೊಲೀಸ್ ಇಲಾಖೆ ಜೊತೆ ಒಗ್ಗೂಡಿ ಟೋಯಿಂಗ್ ಮಾಡಿ. ವಾಹನಗಳನ್ನ ಹರಾಜು ಹಾಕಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆಯಾ ಪಾಲಿಕೆ ವ್ಯಾಪ್ತಿಗಳಲ್ಲಿ ನಿಂತ ವಾಹನಗಳನ್ನು ಅಲ್ಲಿನ ಅಧಿಕಾರಿಗಳೇ ಹರಾಜು ಹಾಕಲಿದ್ದಾರೆ. ಸದ್ಯದಲ್ಲೇ ಯೋಜನೆಯನ್ನು ಆರಂಭಿಸುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.