image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಂಗಳೂರು-ತುಮಕೂರು ಮೆಟ್ರೋ ಹೂಡಿಕೆಗೆ ಕತಾರ್‌ ಕಂಪನಿ ಉತ್ಸುಕ: ಡಾ.ಜಿ.ಪರಮೇಶ್ವರ್‌

ಬೆಂಗಳೂರು-ತುಮಕೂರು ಮೆಟ್ರೋ ಹೂಡಿಕೆಗೆ ಕತಾರ್‌ ಕಂಪನಿ ಉತ್ಸುಕ: ಡಾ.ಜಿ.ಪರಮೇಶ್ವರ್‌

ಬೆಂಗಳೂರು: ಬೆಂಗಳೂರು-ತುಮಕೂರು ನಡುವಿನ ಮೆಟ್ರೋ ಯೋಜನೆಗೆ ಹೂಡಿಕೆ ಮಾಡಲು ಕತಾರ್ ಮೂಲದ ಕಂಪನಿಯು ಮುಂದೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿಗೆ ಅಧಿಕೃತವಾಗಿ ಪತ್ರ ಕೂಡ ನೀಡಿದೆ ಎಂದು ಸಚಿವ ಡಾ.ಜಿ. ಪರಮೇಶ್ವ‌ರ್ ತಿಳಿಸಿದರು. ಉದ್ದೇಶಿತ ಈ ಯೋಜನೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಎರಡು-ಮೂರು ಕಂಪನಿಗಳು ಹೂಡಿಕೆ ಮಾಡಲು ಮುಂದೆ ಬಂದಿವೆ. ಅಷ್ಟೇ ಅಲ್ಲ, ತಾವು ಹೂಡಿಕೆ ಮಾಡಲು ಸಿದ್ಧರಿರುವುದಾಗಿ ಖತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ ಎಂದು ಹೇಳಿದರು. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನೂ ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ. ಇದು ಸಂಘರ್ಷದ ಪ್ರಶ್ನೆಯಲ್ಲ. 'ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು' ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಪರಮೇಶ್ವ‌ರ್, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಹೇಳಿದರು. ನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್‌ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದರು. 2 ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದರು.

Category
ಕರಾವಳಿ ತರಂಗಿಣಿ