image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಪ್ಪಳಿಸಲಿದೆ ದ್ವಿತಾ ಚಂಡಮಾರುತ : 12 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಅಪ್ಪಳಿಸಲಿದೆ ದ್ವಿತಾ ಚಂಡಮಾರುತ : 12 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಲಂಕಾಗೆ ಅಪ್ಪಳಿಸಿರುವ 'ದಿತ್ವಾ' ಚಂಡಮಾರುತ ಈಗ ಭಾರತದ ಕರಾವಳಿಯತ್ತ ಮುಖ ಮಾಡಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ವಾತಾವರಣದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಭಾರತದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಹವಾಮಾನ ಇಲಾಖೆಯು 'ಹಳದಿ' ಮತ್ತು 'ಆರೆಂಜ್' ಅಲರ್ಟ್‌ಗಳನ್ನು ಘೋಷಿಸಿದೆ. ನವೆಂಬರ್ 30ರಿಂದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಚಳಿಯ ಅನುಭವ ಹೆಚ್ಚಾಗಲಿದೆ. ಹಗುರದಿಂದ ಮಧ್ಯಮ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ದಟ್ಟವಾದ ಮಂಜು ಆವರಿಸುವ ಸಾಧ್ಯತೆ ಇದೆ. ನಾಳೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಮತ್ತು ಕೊಡಗು ಸೇರಿದಂತೆ 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ನಿರ್ದಿಷ್ಟವಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

Category
ಕರಾವಳಿ ತರಂಗಿಣಿ