image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ: ಹೆಚ್.​ಡಿ.ಕೆ

ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ: ಹೆಚ್.​ಡಿ.ಕೆ

ಬೆಂಗಳೂರು: ಕುಮಾರಸ್ವಾಮಿ ರಾಜೀನಾಮೆ ಕೊಟ್ಟರಾ? ಎಂದು ಕೇಳಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. "ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ" ಎಂದಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನನ್ನ ಮೇಲಿನ ಆರೋಪಗಳ ಮಾತು ಆಮೇಲೆ. ನಿಮ್ಮ ವಿರುದ್ಧ ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಗಳಿಂದ ಆದೇಶಗಳು ಬಂದಿವೆ. ಅದಕ್ಕೇನು ಹೇಳುತ್ತೀರಿ?. ಹೈಕೋರ್ಟ್​ನಲ್ಲಿ ವಾದ ಮಾಡುವಾಗ ವಕೀಲರು ಮುಡಾ ಹಗರಣದ ಅಕ್ರಮಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನ್ಯಾಯಾಲಯಗಳ ಆದೇಶವೂ ಬಂದಿದೆ. ಹೇಳಿಕೊಳ್ಳುವುದಕ್ಕೆ ನಿಮಗೇನಿದೆ ಎಂದು ಪ್ರಶ್ನಿಸಿದರು.

"ಕುಮಾರಸ್ವಾಮಿ ಸರ್ಕಾರಿ ಭೂಮಿ ತೆಗೆದುಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಾಯಿ ವೆಂಕಟೇಶ್ವರ ಮಿನರಲ್ಸ್ ಬಗ್ಗೆಯೂ ಅವರು ಮಾತನಾಡುತ್ತಿದ್ದಾರೆ. ಈ ಬಗ್ಗೆ ನಾನು ಹಿಂದೆಯೇ ಹೇಳಿದ್ದೇನೆ. ಅರ್ಜಿ ಹಾಕದಿರುವ ಕಂಪನಿಗೆ ಗಣಿ ಗುತ್ತಿಗೆ ಕೊಡಲಾಗಿದೆ ಎನ್ನುತ್ತಿದ್ದಾರೆ. ಅವರು ಅರ್ಜಿ ಹಾಕಿದ್ದಾರೆ, ಆದರೆ ಅವರಿಗೆ ಗಣಿ ಗುತ್ತಿಗೆ ನೀಡಿಲ್ಲ. ರಾಜ್ಯ ಬೊಕ್ಕಸಕ್ಕೆ ನಯಾಪೈಸೆ ನಷ್ಟ ಆಗಿಲ್ಲ. ಹೀಗಿದ್ದ ಮೇಲೆ ಅದು ಹಗರಣ ಹೇಗೆ ಆಗುತ್ತದೆ?. ರಾಜ್ಯ ಸರ್ಕಾರ 2009ರಲ್ಲೇ ಭೂಮಿ ಯಾರಿಗೂ ಕೊಟ್ಟಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಯಾರೋ ಒಬ್ಬ ಅಧಿಕಾರಿ ಮಾಡಿದ ತಪ್ಪಿಗೆ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದರು.

"ಜಂತಕಲ್ ಮೈನಿಂಗ್ ವಿಚಾರದಲ್ಲಿ ಆಗಿನ ಸಿಎಂ ಆದೇಶ ಮಿಸ್ ಕಂಡಕ್ಟ್ ಆಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಹೇಳಲಾಗಿದೆ. ನ್ಯಾ.ಸಂತೋಷ ಹೆಗಡೆ ಅವರು ಹಾಗೆಂದು ಉಲ್ಲೇಖಿಸಿದ್ದಾರೆ. ಅದರ ಹೊರತಾಗಿ ಹಣಕ್ಕಾಗಿ ಅಥವಾ ಭೂಮಿಗಾಗಿ, ಲಾಭಕ್ಕಾಗಿ ಮಾಡಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ. ಸಾಯಿ ವೆಂಕಟೇಶ್ವರ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ 2012ರಿಂದ ಇದೆ. ಮುಡಾ ಹಗರಣ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೋರ್ಟ್ ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಹಲವಾರು ಕಾನೂನು ತಜ್ಞರು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದೇಶದ ಬಗ್ಗೆ ಮಾಧ್ಯಮಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸುದ್ದಿ ಪ್ರಸಾರವಾಗಿದೆ. ಆದರೆ, ಸಿಎಂ ಸಾಹೇಬರಿಗೆ ಕೋರ್ಟ್ ಆದೇಶದ ಪ್ರತಿಯೇ ಸಿಕ್ಕಿಲ್ಲವಂತೆ. ನಿಮ್ಮ ವಿರುದ್ಧ ಬಂದಿರುವ ಆದೇಶದ ಬಗ್ಗೆ ಮಾತನಾಡಿ ಎಂದರೆ, ಜೆಡಿಎಸ್, ಬಿಜೆಪಿ ಒಳಸಂಚು ಮಾಡಿವೆ, ಕುಮಾರಸ್ವಾಮಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಕೇಳುತ್ತಾರೆ ಸಿದ್ದರಾಮಯ್ಯನವರು. ಇದು ನಮ್ಮ ಸಿಎಂ ವರಸೆ" ಎಂದು ಲೇವಡಿ ಮಾಡಿದರು.

Category
ಕರಾವಳಿ ತರಂಗಿಣಿ