image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ1,86,426 ರೈತರ ಖಾತೆಗಳಿಗೆ 17 ಹಂತಗಳಲ್ಲಿ ಒಟ್ಟು ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿದೆ' : ಈಶ್ವರ್ ಖಂಡ್ರೆ

ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ1,86,426 ರೈತರ ಖಾತೆಗಳಿಗೆ 17 ಹಂತಗಳಲ್ಲಿ ಒಟ್ಟು ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿದೆ' : ಈಶ್ವರ್ ಖಂಡ್ರೆ

ಬೀದರ್‌: 'ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ1,86,426 ರೈತರ ಖಾತೆಗಳಿಗೆ 17 ಹಂತಗಳಲ್ಲಿ ಒಟ್ಟು ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಎನ್‍ಡಿಆರ್‌ಎಫ್‌ ಹಾಗೂ ಎಸ್‍ಡಿಆರ್‌ಎಫ್‌ನಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪ್ರತಿ ಹೆಕ್ಟೇರ್‌ಗೆ ಮಳೆಯಾಶ್ರಿತ ₹8,500, ನೀರಾವರಿ ಬೆಳೆಗೆ ₹17,000 ಮತ್ತು ಬಹುವಾರ್ಷಿಕ ಬೆಳೆಗಳಿಗೆ ₹22,500 ಗಳಂತೆ ಬೆಳೆ ಹಾನಿಯಾದ ರೈತರಿಗೆ, 10 ಹಂತಗಳಲ್ಲಿ ಒಟ್ಟು 1,76,382 ರೈತರಿಗೆ ₹127.16 ಕೋಟಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಪರಿಹಾರ ಮೊತ್ತ ₹8,500 ಸಹ 7 ಹಂತಗಳಲ್ಲಿ ಒಟ್ಟು 1,86,426 ರೈತರಿಗೆ ₹134.27 ಕೋಟಿ ಪರಿಹಾರ ನೇರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯ ರೈತರಿಗೆ ಕೇಂದ್ರ ಸರ್ಕಾರದ ಎನ್‍ಡಿಆರ್‌ಎಫ್/ಎಸ್‍ಡಿಆರ್‌ಎಫ್ ಮಾರ್ಗಸೂಚಿ ಅಯನ್ವಯ ಹಾಗೂ ರಾಜ್ಯ ಸಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಪರಿಹಾರ ಮೊತ್ತ ಸೇರಿ 17 ಹಂತಗಳಲ್ಲಿ 1,86,426 ರೈತರಿಗೆ ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿರುತ್ತದೆ. ಆಧಾರ್‌ ಸೀಡಿಂಗ್‌, ರೈತರು ಮೂಲಸ್ಥಳದಲ್ಲಿ ಇರದ ಕಾರಣ 8,615 ಜನರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ. ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಬೀದರ್ ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ಸೋಯಾಬೀನ್, ತೊಗರಿ, ಉದ್ದು, ಹೆಸರು ಮತ್ತು ಹತ್ತಿಯನ್ನು ಒಟ್ಟು 4,32,825 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತಲೂ ಹೆಚ್ಚುವರಿ ಮಳೆಯಾಗಿ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಮಾಂಜ್ರಾ ನದಿಗೆ ಧನೆಗಾಂವ್‌ ಅಣೆಕಟ್ಟೆಯಿಂದ ನೀರು ಹರಿಸಿದ್ದರಿಂದ ಪ್ರವಾಹ ಉಂಟಾಗಿ ಜಿಲ್ಲೆಯಾದ್ಯಂತ 1,67,202.78 ಹೆಕ್ಟೇರ್ ಪ್ರದೇಶದಲ್ಲಿ ₹143.60 ಕೋಟಿ ಬೆಳೆ ಹಾನಿಯಾಗಿತ್ತು. ಬಳಿಕ ಸಮೀಕ್ಷೆ ನಡೆಸಿ, ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ಘೋಷಿಸಲಾಗಿತ್ತು. ಅದರಂತೆ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್‌ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಹಾಜರಿದ್ದರು.

Category
ಕರಾವಳಿ ತರಂಗಿಣಿ