image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಹಂಕಾರದ ಮಾತಾಡುತ್ತಾರೆ : ಹೆಚ್ ಡಿ ಕೆ

ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಹಂಕಾರದ ಮಾತಾಡುತ್ತಾರೆ : ಹೆಚ್ ಡಿ ಕೆ

ಬೆಂಗಳೂರು : ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಹಂಕಾರದ ಮಾತುಗಳನ್ನು ಆಡುತ್ತಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಗುರುವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ 'ಸುಶಾಸನ ದಿನಾಚರಣೆ ಮತ್ತು ಅಟಲ್ ಪುರಸ್ಕಾರ-2025 ಕಾರ್ಯಕ್ರಮ'ದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬೆಂಗಳೂರು ನಗರ ಸೇರಿ ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತು ಆಡುತ್ತಾರೆ. ಪ್ರಧಾನಿ ಬಗ್ಗೆ ಮತ್ತು ಗೃಹ ಸಚಿವರ ಬಗ್ಗೆ ಬಳಸುವ ಪದಗಳನ್ನು ಗಮನಿಸಿದರೆ ಇವರು ಸಂಸ್ಕೃತಿ ಹೊಂದಿರುವ ವ್ಯಕ್ತಿಗಳಾ ಎಂಬ ಅನುಮಾನ ಮೂಡುತ್ತದೆ ಎಂದು ಕಿಡಿಕಾರಿದರು.

ವಾಜಪೇಯಿ ಅವರ ಸ್ಮರಣಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಬಗ್ಗೆ ಮಾತನಾಡಿದರೆ ನಾವು ಸಣ್ಣವರಾಗುತ್ತೇವೆ. ಆದರೆ ಸುಶಾಸನ ಆಡಳಿತ ನೀಡಿದ ದೇಶದ ಮೊದಲ ರಾಜ್ಯ ಕರ್ನಾಟಕ. ಆದರೆ ಇವತ್ತು ರಾಜ್ಯದಲ್ಲಿ ಹುಡುಗಾಟಿಕೆಯ ರಾಜಕಾರಣ ನಡೆಯುತ್ತಿದೆ. ರೈತರು ಬದುಕು, ಶಿಕ್ಷಣಕ್ಷೇತ್ರ, ಆರೋಗ್ಯಕ್ಷೇತ್ರ ಅದೋಗತಿಗೆ ಹೋಗಿದೆ. ಯಾವ ಇಲಾಖೆಯಲ್ಲಿ ಇವತ್ತು ಉತ್ತಮ ಆಡಳಿತ ನಡೆಯುತ್ತಿದೆ ನೀವೆ ಹೇಳಿ? ನಾಡಿನ ಜನತೆ ಬುದ್ಧಿವಂತರಾಗಬೇಕು ಎಂದರು. ವಾಜಪೇಯಿ ಅವರು ಈ ದೇಶ ಕಂಡಂಥ ಮಹಾನ್‌ ನಾಯಕ. ಅವರು ಸಣ್ಣ ಕುಟುಂಬದಲ್ಲಿ ಜನಿಸಿದ್ದರು. ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾಗ ಯಶಸ್ಸು ಕಾಣಲಿಲ್ಲ. ಆದರೆ ಅವರು ನಿರಾಸೆಗೂ ಒಳಗಾಗಲಿಲ್ಲ. ಅವರ ಹೋರಾಟ ಸುದೀರ್ಘವಾಗಿತ್ತು. ದಾಖಲೆಯಲ್ಲಿ ಉಳಿಯುವಂಥ ಹೋರಾಟ ಅವರದಾಗಿತ್ತು. ಅಂತಹ ನಾಯಕರನ್ನು ಇಂದು ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ನಾವು ಆರ್ಥಿಕವಾಗಿ, ತಾಂತ್ರಿಕವಾಗಿ ಬೆಳೆಯುತ್ತಿದ್ದೇವೆ. ಆದರೆ ಮಾನವೀಯತೆ, ಮನುಷತ್ವ ಸಂಪೂರ್ಣವಾಗಿ ನಾಶವಾಗುತ್ತಿದೆ. ನಮ್ಮ ಸಂಸ್ಥಾರ, ನಮ್ಮ ಕುಟುಂಬಗಳ ಬಾಂದವ್ಯಗಳು ಮುಂದುವರಿಯಬೇಕು. ಹೀಗಾಗಿ ನಮ್ಮ ಹಿಂದಿನ ಸಂಸ್ಕೃತಿಯನ್ನು ಪ್ರಾಮಾಣಿಕವಾಗಿ ಮುಂದಿನ ಪೀಳಿಗೆಗೆ ವರ್ಗಾಹಿಸುವ ಕೆಲಸವಾಗಬೇಕು. ನಮ್ಮ ಸಂಸ್ಕಾರ ಮುಂದುವರೆಸಲು ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.

Category
ಕರಾವಳಿ ತರಂಗಿಣಿ