image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹೆಜ್ಜಾಲ-ಸತ್ಯಮಂಗಲ ಹೊಸ ರೈಲ್ವೆ ಯೋಜನೆಗೆ ಭೂಮಿ ಮಾಡಿಕೊಡಿ, ಯೋಜನೆಯನ್ನು ನಾನು ಪೂರ್ಣಗೊಳಿಸುತ್ತೇನೆ : ವಿ ಸೋಮಣ್ಣ

ಹೆಜ್ಜಾಲ-ಸತ್ಯಮಂಗಲ ಹೊಸ ರೈಲ್ವೆ ಯೋಜನೆಗೆ ಭೂಮಿ ಮಾಡಿಕೊಡಿ, ಯೋಜನೆಯನ್ನು ನಾನು ಪೂರ್ಣಗೊಳಿಸುತ್ತೇನೆ : ವಿ ಸೋಮಣ್ಣ

ರಾಮನಗರ : ಬೆಂಗಳೂರಿನ ಮಾದರಿಯಲ್ಲೇ ಈ ಭಾಗದ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಸಂಕಲ್ಪ ಮಾಡಲಾಗಿದೆ. ಸಂಕ್ರಾಂತಿ ಹಬ್ಬದ ನಂತರ 101 ಎಲ್.ಸಿ ಗೇಟ್-ಗಳನ್ನು ಮೇಲ್ದರ್ಜೆಗೆ ಏರಿಸಿ ಅಂಡರ್ ಪಾಸ್ ನಿರ್ಮಾಣ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ರೂಪ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಘೋಷಿಸಿದರು. ಬಿಡದಿ ಮತ್ತು ರಾಮನಗರ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು. ಹೆಜ್ಜಾಲ-ಸತ್ಯಮಂಗಲ ಹೊಸ ರೈಲ್ವೆ ಯೋಜನೆ (142 ಕಿ.ಮೀ) ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದರು. 'ನಾನು ಡಿಕೆ ಶಿವಕುಮಾರ್ ಅವರಿಗೆ ಫೈಲ್ ಕೊಡ್ರಪ್ಪ ಎಂದು ಕೇಳಿದೆ, ಆದರೆ ಅವರು ಕೊಡಲಿಲ್ಲ. ಈಗಲೂ ಕೇಳ್ತಿದ್ದೇನೆ, ನಮಗೆ ಭೂಮಿ ಮಾಡಿಕೊಡಿ, ಯೋಜನೆಯನ್ನು ನಾನು ಪೂರ್ಣಗೊಳಿಸುತ್ತೇನೆ. ದಯವಿಟ್ಟು ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಿ ಜಾಗ ಕೊಡಿಸಿ ಎಂದು ಶಾಸಕ ಬಾಲಕೃಷ್ಣ ಅವರ ಸಮ್ಮುಖದಲ್ಲೇ ಮನವಿ ಮಾಡಿದರು.

ರೈಲ್ವೆ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದಾಗ, ಕೌಂಟರ್ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ. 'ಅದೇ ನಿಮಗೆ ಬಂದಿರೋ ಗ್ರಹಾಚಾರ! ಕೇಂದ್ರ ಸರ್ಕಾರ ಎಂಬುದು ಒಂದು ಸಮುದ್ರ, ಅಲ್ಲಿ ಹಣದ ಕೊರತೆ ಇಲ್ಲ. ಸೋಮಣ್ಣನಂತಹವರು ಸಚಿವರಾಗಿರುವಾಗ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು. ಅಲ್ಲದೆ, ರಾಜ್ಯ ಸರ್ಕಾರ ದಿನಬೆಳಗಾದರೆ ಟೀಕೆ ಮಾಡುವುದನ್ನು ಬಿಟ್ಟು ಕೇಂದ್ರದ ನೆರವನ್ನು ಸದುಪಯೋಗಪಡಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

Category
ಕರಾವಳಿ ತರಂಗಿಣಿ