ತುಮಕೂರು: ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಅಡಿಯಲ್ಲಿ ಸಿಬಿಐಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳಿ ತನಿಖೆ ಮಾಡಲು ಅವಕಾಶವಿದೆ. ಆದರೆ ಈಗ ರಾಜ್ಯ ಸರ್ಕಾರದ ಅನುಮತಿ ಪಡೆದು ರಾಜ್ಯದಲ್ಲಿ ಸಿಬಿಐ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, "ಸಿಬಿಐ ವಿವಿಧ ರಾಜ್ಯಗಳಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ತನಿಖೆ ಮಾಡಬಹುದು. ಕೆಲವು ರಾಜ್ಯದಲ್ಲಿ ಸಿಬಿಐ ನೇರವಾಗಿ ಬಂದು ತನಿಖೆ ಮಾಡಬಹುದು. ನಮ್ಮ ರಾಜ್ಯದಲ್ಲಿಯೂ ಕೂಡ ಇಲ್ಲಿವರೆಗೂ ಅದೇ ರೀತಿ ಇತ್ತು. ಈ ಹಿಂದೆ ಬೇಡ ಎಂದು ಮಾಡಿದ್ದೇವೆ" ಎಂದು ತಿಳಿಸಿದರು.
"ಪ್ರಕರಣದ ಬಗ್ಗೆ ತನಿಖೆ ಪ್ರಾರಂಭ ಮಾಡಲು ಎಫ್‌ಐಆರ್ ದಾಖಲು ಮಾಡಲಾಗಿದೆ. ಈಗಾಗಲೇ ಯಾವುದೇ ತನಿಖೆಗೂ ಸಿದ್ಧ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ ತನಿಖೆಗೆ ಯಾವುದೇ ವಿರೋಧವಿಲ್ಲ ತನಿಖೆ ಮಾಡಲಿ. ತನಿಖೆಯ ವರದಿ ಆಧಾರದ ಮೇಲೆ ನಾವು ಮತ್ತು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತೇವೆ".
"ತನಿಖೆಯಲ್ಲಿ ಸರ್ಕಾರದ ನೇರ ಹಸ್ತಕ್ಷೇಪ ಇರುವುದಿಲ್ಲ. ಲೋಕಾಯುಕ್ತ ಪೊಲೀಸ್ ಸರ್ಕಾರದ ಅಧೀನದಲ್ಲಿ ಇಲ್ಲ. ಸರ್ಕಾರದ ಅವರಿಗೆ ಸವಲತ್ತು ಕೊಡಬಹುದು. ಆದರೆ ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಇರುವುದಿಲ್ಲ. ಅದು ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಅವರೇ ಪಾರದರ್ಶಕವಾಗಿ ತನಿಖೆ ಮಾಡಲು ಅವಕಾಶವಿದೆ" ಎಂದರು.