image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಿಟಿ ಸ್ಕ್ಯಾನಿಂಗ್ ಕೇಂದ್ರಗಳು ತಾಂತ್ರಿಕ ಅಡಚಣೆಯಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದರಿಂದ ಹಾವೇರಿ ಜಿಲ್ಲೆಯಲ್ಲಿ ಜನರ ಪರದಾಟ

ಸಿಟಿ ಸ್ಕ್ಯಾನಿಂಗ್ ಕೇಂದ್ರಗಳು ತಾಂತ್ರಿಕ ಅಡಚಣೆಯಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದರಿಂದ ಹಾವೇರಿ ಜಿಲ್ಲೆಯಲ್ಲಿ ಜನರ ಪರದಾಟ

ಹಾವೇರಿ: ಕಳೆದ ಮೂರು ದಿನಗಳಿಂದ ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ಸೆಂಟರ್ ಸೇವೆ ಸ್ಥಗಿತಗೊಂಡ ಪರಿಣಾಮ ಜಿಲ್ಲಾಸ್ಪತ್ರೆಯಲ್ಲಿ ಉಚಿತ ರಿಯಾಯತಿ ದರದಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿಕೊಳ್ಳಲು ದೂರದೂರಿಂದ ಬರುವ ಬಡ ರೋಗಿಗಳು ಪರದಾಡುವಂತಾಗಿದೆ. ಕೆಲವರು ಸಾಲ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್‌ ಮಾಡಿಸಿಕೊಳ್ಳುತ್ತಿದ್ದರೆ, ದುಡ್ಡಿಲ್ಲದವರು ಸ್ಕ್ಯಾನ್ ಇಲ್ಲದೆ ಕೇವಲ ಚಿಕಿತ್ಸೆ ಪಡೆದು ಗ್ರಾಮಕ್ಕೆ ಮರಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ. 

ಸ್ಕ್ಯಾನ್ ಸೆಂಟರ್ ನಿರ್ವಹಣೆ ಮಾಡುತ್ತಿರುವ ಕೃಷ್ಣ ಡೈಗ್ನೋಸ್ಟಿಕ್‌ಗೆ ಕಳೆದ 6 ತಿಂಗಳುಗಳಿಂದ ಸರ್ಕಾರ ಹಣ ಪಾವತಿ ಮಾಡದಿರುವುದರಿಂದ ಸಿಟಿ ಸ್ಕ್ಯಾನ್‌ ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆ ಸ್ಥಗಿತಗೊಂಡಿದೆ. ಕೃಷ್ಣ ಡೈಗ್ನೋಸ್ಟಿಕ್ಸ್ ರಾಜ್ಯದ 14 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪುಣೆ ಮೂಲದ ಈ ಕಂಪನಿ 2017ರಲ್ಲಿಯೇ ಆರೋಗ್ಯ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದೆ.

ಹಾವೇರಿ ಜಿಲ್ಲಾಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ಪರಮೇಶ್ ಹಾವನೂರು ಮಾತನಾಡಿ, ''ಇದು ಸರ್ಕಾರದ ಮಟ್ಟದಲ್ಲಿ ಆದ ಒಪ್ಪಂದ. 12 ಜಿಲ್ಲೆಗಳಲ್ಲಿ ಈ ರೀತಿಯಾಗಿತ್ತು. ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿಯೂ ಸಿಟಿ ಸ್ಕ್ಯಾನ್ ಸೆಂಟರ್ ಬಂದಾಗಿತ್ತು. ಸರ್ಕಾರ ಶುಕ್ರವಾರವಷ್ಟೇ ಮಧ್ಯಾಹ್ನ ಕಂಪನಿ ಜೊತೆ ಮಾತನಾಡಿದ್ದರಿಂದ ಸಿಟಿ ಸ್ಕ್ಯಾನಿಂಗ್ ಸೆಂಟರ್ ಪುನಃ ಆರಂಭವಾಗಲಿದೆ'' ಎಂದು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ