image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಸರಕಾರ

ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಸರಕಾರ

ಬೆಂಗಳೂರು : ಹೊಸ ವರ್ಷದ ಸಂಭ್ರಮದಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಸರ್ಕಾರ, ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 2026ರ ಜನವರಿ 1ರಿಂದ ಜೂನ್ ತಿಂಗಳವರೆಗೆ ಸಾರಿಗೆ ನೌಕರರು ಪ್ರತಿಭಟನೆ ಅಥವಾ ಮುಷ್ಕರ ನಡೆಸುವಂತಿಲ್ಲ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿ ಮುಷ್ಕರಕ್ಕೆ ಮುಂದಾದಲ್ಲಿ, ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. 2025ರ ಡಿಸೆಂಬರ್ 31ಕ್ಕೆ ಈ ಹಿಂದಿನ ಮುಷ್ಕರ ನಿಷೇಧದ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಾರಿಗೆ ಸಂಸ್ಥೆಯ ಎಲ್ಲಾ ಘಟಕಗಳಿಗೂ ಈ ಆದೇಶದ ಪ್ರತಿಯನ್ನು ರವಾನಿಸಲಾಗಿದ್ದು, ಪ್ರತಿಯೊಬ್ಬ ನೌಕರನ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಹಬ್ಬ ಮತ್ತು ರಜೆಗಳ ಸಾಲಿನಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Category
ಕರಾವಳಿ ತರಂಗಿಣಿ