image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ : ಹೈಕೋರ್ಟ್

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ : ಹೈಕೋರ್ಟ್

ಬೆಂಗಳೂರು: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವವರನ್ನು ಸೇವೆಯಿಂದ ತೆಗೆದು ಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ಜ್ಯೋತಿ ಅವರ ಪೀಠ ಪೂರ್ವಾನುಮತಿ ಮತ್ತು ರಜೆ ಪಡೆದುಕೊಳ್ಳದೆ ವೆಂಕಟರಾಮಯ್ಯ 2016ರ ಡಿಸೆಂಬರ್ 1ರ ನಂತರ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಇದು ಸಾಬೀತದ ಹಿನ್ನೆಲೆಯಲ್ಲಿ ಬಿಎಂಟಿಸಿ ಸೇವೆಯಿಂದ ವಜಾ ಮಾಡಿದೆ. ಉದ್ಯೋಗ ನಿರ್ವಹಿಸುವ ವೇಳೆ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಇಲ್ಲದೆ ಗೈರಾಗುವುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಉದ್ಯೋಗಿಯ ಗೈರು ಹಾಜರಿಯನ್ನು ಹಕ್ಕು ಎಂದು ಕ್ಲೇಮು ಮಾಡಲಾಗದು. ರಜೆ ಇಲ್ಲದೇ ಕೆಲಸಕ್ಕೆ ಗೈರಾಗುವುದು ಶಿಸ್ತಿನ ಉಲ್ಲಂಘನೆ, ಇಲ್ಲಿ ಅನಧಿಕೃತವಾಗಿ ಕೆಲಸಕ್ಕೆ ಗೈರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ನೀಡಲಾಗಿದೆ. ದೀರ್ಘಾವಧಿ ಸೇವೆಯ ದುರ್ನಡತೆ ಶ್ರಮಿಸುವ ಮಾನದಂಡವಲ್ಲ ಎಂದು ನ್ಯಾಯಪೀಠ ಹೇಳಿದೆ.

Category
ಕರಾವಳಿ ತರಂಗಿಣಿ