ಬೆಂಗಳೂರು : ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೂವರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣ ಯಾವುದೇ ತಿರುವು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಕಲ್ಲು ತೂರಿದ ಪರಿಣಾಮ ಓರ್ವ ಹೆಣ್ಣು ಮಗಳ ತಲೆಗೆ ಗಾಯವಾಗಿತ್ತು. ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದರೆ. ಅವರು ಚಿಕ್ಕ ಮಕ್ಕಳು. ಅವರು 15, 16 ವರ್ಷದೊಳಗಿನ ಅಪ್ರಾಪ್ತ ಬಾಲಕರು. ಅವರ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ಅವರಿಗೆ ಯಾರು ಪ್ರಚೋದನೆ ಮಾಡಿದರೋ ಗೊತ್ತಿಲ್ಲ..ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.