image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೇಂದ್ರ ಸಚಿವರಿಗೆ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್​​ ಕಾರ್ಯಕರ್ತರು...!

ಕೇಂದ್ರ ಸಚಿವರಿಗೆ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್​​ ಕಾರ್ಯಕರ್ತರು...!

ಕೊಪ್ಪಳ : ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ ಘಟನೆ ನಡೆದಿದೆ.

ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ ತೆರಳಿದ್ದಾರೆ. ಉದ್ರಿಕ್ತ ಕಾಂಗ್ರೆಸ್​​ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರತ್ತಲೂ ಕುರ್ಚಿ ತೂರಿದ್ದಾರೆ. ಶಂಕು ಸ್ಥಾಪನೆ ಮುಗಿಸಿ ಅವರು ಹೊರಡುತ್ತಿದ್ದ ವೇಳೆ ಘಟನೆ ನಡೆದಿದ್ದು, ಈ ವೇಳೆ ಅಂಗರಕ್ಷಕರು ಸೋಮಣ್ಣರತ್ತ ಬರುತ್ತಿದ್ದ ಕುರ್ಚಿಗಳನ್ನು  ತಡೆದಿದ್ದಾರೆ. ಇದರಿಂದ ಸಂಭವನೀಯ ಅನಾಹುತ ತಪ್ಪಿದೆ. ಘಟನೆ ಬಗ್ಗೆ ಮಾತನಾಡಿರುವ ಸೋಮಣ್ಣ, ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಆದರೂ ಕಾರ್ಯಕರ್ತರ ಮೂಲಕ ಗಲಾಟೆ ಮಾಡಿಸಿದ್ದಾರೆ. ಸುಮಾರು 27 ಕೋಟಿ. ರೂಪಾಯಿ ವೆಚ್ಚದ ಹಿಟ್ನಾಳ್, ಮುನಿರಾಬಾದ್, ಗಿಣಗೇರಾ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ