image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪೊಲೀಸ್ ಇಲಾಖೆಯ ತನಿಖೆ ತೀವ್ರ: ಜಾಗ ಖಾಲಿ ಮಾಡುತ್ತಿರುವ ಕೋಗಿಲು ಲೇಔಟ್‌ನ ಅಕ್ರಮ ನಿವಾಸಿಗಳು!

ಪೊಲೀಸ್ ಇಲಾಖೆಯ ತನಿಖೆ ತೀವ್ರ: ಜಾಗ ಖಾಲಿ ಮಾಡುತ್ತಿರುವ ಕೋಗಿಲು ಲೇಔಟ್‌ನ ಅಕ್ರಮ ನಿವಾಸಿಗಳು!

ಬೆಂಗಳೂರು : ಯಲಹಂಕ ಸಮೀಪದ ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆಯನ್ನು ತೀವ್ರಗೊಳಿಸುತ್ತಿದ್ದಂತೆಯೇ, ಲೇಔಟ್‌ನಲ್ಲಿದ್ದ ಅಕ್ರಮ ನಿವಾಸಿಗಳು ಜಾಗ ಖಾಲಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಪೊಲೀಸರು ಒತ್ತುವರಿದಾರರ ಹಿನ್ನೆಲೆ ಮತ್ತು ದಾಖಲೆಗಳನ್ನು ಜಾಲಾಡಲು ಆರಂಭಿಸಿದ್ದು, ತನಿಖೆ ಚುರುಕಾಗುತ್ತಿದ್ದಂತೆಯೇ ಲೇಔಟ್‌ನಲ್ಲಿದ್ದ ಉತ್ತರ ಪ್ರದೇಶ, ಆಂಧ್ರಪ್ರದೇಶ ಮೂಲದ ಅನೇಕ ಕುಟುಂಬಗಳು ಮನೆಗಳನ್ನು ಖಾಲಿ ಮಾಡಿ ಪರಾರಿಯಾಗುತ್ತಿವೆ. ವಿಶೇಷವಾಗಿ ಕೋಗಿಲು ಲೇಔಟ್‌ನ ಫಕೀರ್ ಬಡಾವಣೆಯ ಕೆಳಭಾಗದಲ್ಲಿದ್ದ ಹೊರರಾಜ್ಯದ ಕುಟುಂಬಗಳು ಈಗ ಕಾಣಿಸುತ್ತಿಲ್ಲ. 'ನಮ್ಮ ಬಳಿ ಎಲ್ಲಾ ಸರಿಯಾದ ದಾಖಲೆಗಳಿವೆ' ಎಂದು ವಾದಿಸುತ್ತಿದ್ದವರೂ ಕೂಡ ಪೊಲೀಸ್ ವಿಚಾರಣೆಗೆ ಹೆದರಿ ರಾತ್ರೋರಾತ್ರಿ ಜಾಗ ಖಾಲಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಒಟ್ಟು 167 ಒತ್ತುವರಿದಾರರ ಪೈಕಿ ಕೇವಲ 25 ಜನರು ಮಾತ್ರ ಮನೆ ಪಡೆಯಲು ಅರ್ಹರು ಎಂಬ ಪ್ರಾಥಮಿಕ ವರದಿ ಲಭ್ಯವಾಗಿದೆ. ಆದರೆ, ಈ 25 ಜನರ ಹಿನ್ನೆಲೆಯನ್ನೂ ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅವರ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಮೂಲ ಸ್ಥಳದ ಬಗ್ಗೆ ತನಿಖೆ ನಡೆಯುತ್ತಿದೆ. ಅರ್ಹರ ಪಟ್ಟಿ ಇನ್ನೂ ಅಂತಿಮವಾಗದ ಕಾರಣ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸಲ್ಲಿಕೆಯಾಗಿಲ್ಲ. ಅಕ್ರಮವಾಗಿ ನೆಲೆಸಿರುವವರು ಮತ್ತು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಸೌಲಭ್ಯ ಪಡೆಯಲು ಯತ್ನಿಸುತ್ತಿರುವವರ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದೆ. ಅಂತಿಮ ವರದಿ ಬರುವವರೆಗೂ ಮನೆ ಹಂಚಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದ್ದು, ಪ್ರತಿಯೊಂದು ದಾಖಲೆಯನ್ನು ಹತ್ತು ಬಾರಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. 

Category
ಕರಾವಳಿ ತರಂಗಿಣಿ