image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಂಬರುವ ಜಿಬಿಎ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲು ಬ್ಯಾಲೆಟ್‌ ಪೇಪರ್‌

ಮುಂಬರುವ ಜಿಬಿಎ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲು ಬ್ಯಾಲೆಟ್‌ ಪೇಪರ್‌

ಬೆಂಗಳೂರು : ಮುಂಬರುವ ಜಿಬಿಎ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲು ಬ್ಯಾಲೆಟ್‌ ಪೇಪರ್‌ ಬಳಸಲಾಗುವುದು ಎಂದು ಜಿಬಿಎ ಚುನಾವಣಾ ವಿಶೇಷ ಆಯುಕ್ತರು ಮಾಹಿತಿ ನೀಡಿದ್ದಾರೆ. ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ 1 ಅಕ್ಟೋಬರ್ 2025*ನ್ನು ಆಧಾರವಾಗಿ ತೆಗೆದುಕೊಂಡು ಸಿದ್ಧಪಡಿಸಲಾದ ಕರಡು ಮತದಾರರ ಪಟ್ಟಿಯಲ್ಲಿ *45,69,193 ಪುರುಷರು, 43,20,583 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,91,411 ಮತದಾರರು ಇದ್ದಾರೆ ಎಂದು ವಿವರಿಸಿದರು. ಜನವರಿ 20, 2026 ರಿಂದ ಫೆಬ್ರವರಿ 3, 2026 ರವರೆಗೆ ಬೂತ್ ಲೆವಲ್ ಅಧಿಕಾರಿಗಳು (ಬಿ.ಎಲ್.ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಬರಲಿದ್ದಾರೆ ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿದೆ. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆಬ್ರವರಿ 4 ರಿಂದ ಫೆಬ್ರವರಿ 18, 2026 ರವರೆಗೆ ನಡೆಯಲಿದ್ದು, ಮಾರ್ಚ್ 16, 2026 ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಹೇಳಿದರು. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 23 ರಲ್ಲಿ ಅತಿ ಹೆಚ್ಚು 49,530 ಮತದಾರರು ಇದ್ದರೆ, ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 16 ರಲ್ಲಿ ಅತಿ ಕಡಿಮೆ 10,926 ಮತದಾರರು ಇದ್ದಾರೆ. ಒಟ್ಟು 369 ವಾರ್ಡ್‌ಗಳಲ್ಲಿ 8,044 ಮತಗಟ್ಟೆಗಳು ಇರಲಿವೆ ಎಂದು ಆಯುಕ್ತರು ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ