ಬೆಂಗಳೂರು : ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. 22 ಮಠಗಳಿಗೆ ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ಸೂಚಿಸಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನು ಮಂಜೂರು ಮಾಡಲಿದೆ.