image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ : ಹೆಚ್.ಡಿ.ಕುಮಾರಸ್ವಾಮಿ

ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ : ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: 'ಜಿಲ್ಲೆಯಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಿವಳ್ಳಿ ಗ್ರಾಮದಲ್ಲಿ ಶುಕ್ರವಾರ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಗೆ ಏನು ಮಾಡಬೇಕು ಎಂಬುದು ಖಂಡಿತ ನನಗೆ ಗೊತ್ತಿದೆ. ಈ ಬಗ್ಗೆ ಬೇರೆ ಯಾರ ಸರ್ಟಿಫಿಕೇಟ್ ಬೇಕಿಲ್ಲ. ಈ ಬಗ್ಗೆ ನಾನೇ ಸಿಎಂಗೆ ಪತ್ರ ಬರೆದಿದ್ದೇನೆ ಎಂದರು. ಮಂಡ್ಯದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ 'ಆಟೋಮೇಟಿವ್‌ ರೀಸರ್ಚ್ ಅಸೋಸಿಯೆಷನ್ ಆಫ್ ಇಂಡಿಯಾ' (ಎ.ಆರ್‌.ಎ.ಐ) ಸಂಸ್ಥೆ ಸ್ಥಾಪಿಸಲು ಜಾಗ ಕೊಡುವಂತೆ ನನ್ನ ಇಲಾಖೆಯಿಂದಲೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದರು.

ಇದರಲ್ಲಿ ಅನವಶ್ಯಕ ರಾಜಕೀಯ ಅಗತ್ಯ ಇಲ್ಲ. ಜಿಲ್ಲೆಯ ಅಭಿವೃದ್ಧಿ ಎಲ್ಲರ ಜವಾಬ್ದಾರಿ. ಜಿಲ್ಲಾಧಿಕಾರಿ ಜಾಗ ಇಲ್ಲ ಹೇಳಿದ್ದರು. ಶಾಸಕರಿಗೆ ಜಾಗ ಕೊಡುವ ಅವಕಾಶ ಇದೆಯೇ? ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ಸಿಗರು ರಾಜಕೀಯ ಮಾಡ್ತಿದ್ದಾರೆ‌ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಮಂಡ್ಯಕ್ಕೆ ಕೈಗಾರಿಕೆ ತರಲು ಎಷ್ಟು ಶ್ರಮ ಹಾಕುತ್ತಿದ್ದೇನೆ ಅನ್ನುವುದು ನನಗೆ ಮಾತ್ರ ಗೊತ್ತು. ರಾಜಕೀಯವಾಗಿ ಟೀಕೆ ಸಾಮಾನ್ಯ. ಜಿಲ್ಲೆಗೆ ಒಳ್ಳೆದಾಗಬೇಕು ಎಂದರೆ ಜೆಡಿಎಸ್ ಒದ್ದೊಡಿಸಬೇಕು ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಯಾರನ್ನು ಒದ್ದೊಡಿಸುತ್ತಾರೆ ಅನ್ನುವುದು ಗೊತ್ತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Category
ಕರಾವಳಿ ತರಂಗಿಣಿ