image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ 42,345 ಮನೆಗಳ ಹಸ್ತಾಂತರ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ 42,345 ಮನೆಗಳ ಹಸ್ತಾಂತರ

ಹುಬ್ಬಳ್ಳಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಿಸಿದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ ಇಂದು ಹುಬ್ಬಳ್ಳಿಯಲ್ಲಿ ನಡೆಯಿತು. ಒಟ್ಟಿಗೆ ಇಷ್ಟು ಮನೆಗಳ ಹಸ್ತಾಂತರ ದೇಶದಲ್ಲೇ ಮೊದಲಾಗಿದೆ. ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟ ಸಹೋದ್ಯೋಗಿಗಳು, ಶಾಸಕರು, ಜನಪ್ರತಿನಿಧಿಗಳು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

2016 -17 ರಲ್ಲಿ ಮಂಜೂರಾದ 1,80,253 ಮನೆಗಳ ಪೈಕಿ ಮೊದಲ ಹಂತದಲ್ಲಿ ಕಳೆದ ವರ್ಷ 36,789 ಮನೆಗಳನ್ನು ಹಸ್ತಾಂತರ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 42,345 ಮನೆಗಳ ಹಸ್ತಾಂತರ ಮಾಡಲಾಗುವುದು. ಇನ್ನೆರಡು ತಿಂಗಳಲ್ಲಿ ಮತ್ತೆ 30,000 ಮನೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ. 20,312 ಮನೆಗಳನ್ನು ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ವಿತರಿಸಲಾಗುವುದು. 22,003 ಮನೆಗಳನ್ನು ಇತರೆ ವರ್ಗದವರಿಗೆ ಹಂಚಿಕೆ ಮಾಡಲಾಗುವುದು.

Category
ಕರಾವಳಿ ತರಂಗಿಣಿ