image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವ ಸ್ತಬ್ಧಚಿತ್ರಗಳ ಪಟ್ಟಿಯಿಂದ ಕರ್ನಾಟಕದ ಕೈಬಿಟ್ಟ ಕೇಂದ್ರ ಸರಕಾರ!

ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವ ಸ್ತಬ್ಧಚಿತ್ರಗಳ ಪಟ್ಟಿಯಿಂದ ಕರ್ನಾಟಕದ ಕೈಬಿಟ್ಟ ಕೇಂದ್ರ ಸರಕಾರ!

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ತನ್ನ ವಿಶಿಷ್ಟ ಕಲೆ ಮತ್ತು ಸಂಸ್ಕೃತಿಯ ಮೂಲಕ ಗಮನ ಸೆಳೆಯುತ್ತಿದ್ದ ಕರ್ನಾಟಕಕ್ಕೆ ಈ ಬಾರಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವ ಸ್ತಬ್ಧಚಿತ್ರಗಳ ಪಟ್ಟಿಯಿಂದ ಕರ್ನಾಟಕದ ಹೆಸರನ್ನು ಕೈಬಿಟ್ಟಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರ ಈ ಬಾರಿ 'ಮಿಲೆಟ್ಸ್ ಟು ಮೈಕ್ರೋಚಿಪ್' (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ವಿನೂತನ ವಿಷಯದಡಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸಿತ್ತು. ಕೃಷಿ ಮತ್ತು ತಂತ್ರಜ್ಞಾನ ಎರಡರಲ್ಲೂ ರಾಜ್ಯ ಸಾಧಿಸಿರುವ ಪ್ರಗತಿಯನ್ನು ಜಗತ್ತಿಗೆ ಸಾರುವ ಉದ್ದೇಶ ಇದಾಗಿತ್ತು. ಆದರೆ, ಸಮಯದ ನಿರ್ಬಂಧ ಮತ್ತು ಪರ್ಯಾಯ ರಾಜ್ಯಗಳಿಗೆ ಅವಕಾಶ ನೀಡುವ ನೀತಿಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇದಕ್ಕೆ ಪರೇಡ್‌ನಲ್ಲಿ ಅವಕಾಶ ನಿರಾಕರಿಸಿದೆ. ಬದಲಾಗಿ ಕೆಂಪುಕೋಟೆಯಲ್ಲಿ ನಡೆಯುವ 'ಭಾರತ್ ಪರ್ವ್'ನಲ್ಲಿ ಪ್ರದರ್ಶಿಸಲು ಸೂಚಿಸಿದೆ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ