ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು 1,200 ಕೋಟಿ ರೂಪಾಯಿ ರೆಡಿ ಮಾಡ್ಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಇಡಿ ತನಿಖೆಗೆ ದೂರು ನೀಡುವ ಸಂಬಂಧ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು 1,200 ಕೋಟಿ ರೆಡಿ ಮಾಡ್ಕೊಂಡಿದ್ದಾರೆ ಎಂಬ ಯತ್ನಾಳ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಇದರ ಮಾಹಿತಿ ನಮಗೂ ಇದೆ. ಈ ಬಗ್ಗೆ ಇವತ್ತು ಕಾಂಗ್ರೆಸ್ ಲೀಗಲ್ ಟೀಮ್ ಮೀಟಿಂಗ್ ಕರೆದಿದ್ದೇನೆ. ಈ ಮಾಹಿತಿಯನ್ನು ಹೈಕಮಾಂಡ್ ನಾಯಕರಿಗೂ ತಿಳಿಸಿದ್ದೇನೆ. ಇದು ಇಡಿ ತನಿಖೆಯ ವ್ಯಾಪ್ತಿಗೆ ಬರುವ ವಿಚಾರ ಎಂದರು.
ಎತ್ತಿನಹೊಳೆ ಬಗ್ಗೆ ಏನು ಮಾತು ಕೊಟ್ಟಿದ್ದೇವೋ ಅದನ್ನು ಮಾಡಬೇಕು. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ರಾಜಕೀಯ ಮಾಡೇ ಮಾಡುತ್ತೇವೆ. ಇದರ ಜೊತೆ ಜನರಿಗೆ ಒಳ್ಳೆಯ ಕೆಲಸವನ್ನೂ ಮಾಡಬೇಕು. ಮೀಟರ್ ಓಡುತ್ತಿರುತ್ತದೆ, ಅಭಿವೃದ್ಧಿ ಕೂಡ ಮಾಡಬೇಕು ಎಂದು ತಿಳಿಸಿದರು.