image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗಂಗಾವತಿ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್

ಗಂಗಾವತಿ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್

ಬಳ್ಳಾರಿ: ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವೇಶ ನಿರ್ಭಂಧಕ್ಕೆ ಒಳಗಾಗಿದ್ದ ಮಾಜಿ ಸಚಿವ, ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರೆಡ್ಡಿ ಅಭಿಮಾನಿಗಳು ನಗರದ ಎಸ್ಪಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

''ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಶಾಸಕ ಜನಾರ್ದನ ರೆಡ್ಡಿ ಅವರು ಪುನಃ ಬಳ್ಳಾರಿಗೆ ಆಗಮಿಸುತ್ತಿದ್ದಾರೆ. ಕನಕ ದುರ್ಗಮ್ಮನ ಆಶೀರ್ವಾದದಿಂದ ಅವರು ಮತ್ತೆ ಬರುವಂತಾಗಿದೆ. ಗುರುವಾರ ನಗರಕ್ಕೆ ಆಗಮಿಸಲಿದ್ದು, ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಸುಮಾರು 20 ಸಾವಿರ ಜನರನ್ನು ಸೇರಿಸಲು ಪ್ರಯತ್ನ ಮಾಡಲಾಗುತ್ತಿದೆ. 13 ವರ್ಷಗಳ ಬಳಿಕ ಜಿಲ್ಲೆಯ ಜನರು ಅವರನ್ನು ನೋಡುವ ಅವಕಾಶ ಬಂದಿದೆ'' ಎಂದು ರೆಡ್ಡಿ ಅಭಿಮಾನಿ ಬಳಗದ ಸದಸ್ಯರು ಖುಷಿ ಹಂಚಿಕೊಂಡರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ರೆಡ್ಡಿಗೆ ಜಾಮೀನು ನೀಡುವಾಗ ಬಳ್ಳಾರಿಗೆ ಭೇಟಿ ನೀಡದಂತೆ ಕೋರ್ಟ್ ನಿರ್ಬಂಧ ಹೇರಿತ್ತು. ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಆದ್ದರಿಂದ ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದಾಗಿದೆ.

Category
ಕರಾವಳಿ ತರಂಗಿಣಿ