image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಖಾಸಗಿ ಬಸ್ಸು ಬೆಂಕಿಗಾಹುತಿಯಾದ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಇಂದು ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ 'ಸಂಜನಾ ಟ್ರಾವೆಲ್ಸ್‌'ಎಂಬ ಖಾಸಗಿ ಸಂಸ್ಥೆಗೆ ಸೇರಿದ ಈ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ತಲುಪಿದಾಗ ಬಸ್ ಚರಂಡಿಯ ಸ್ಲಾಬ್ ಗೆ ಢಿಕ್ಕಿಯಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಕ್ಷಣಾರ್ಧದಲ್ಲಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯ ವೇಳೆ ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರಿದ್ದು, ಬೆಂಕಿ ಬಸ್ಸನ್ನು ಆವರಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ತುರ್ತಾಗಿ ಬಸ್ಸಿನಿಂದ ಇಳಿದು ಪಾರಾಗಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.ಅದರಲ್ಲಿದ್ದ ಪ್ರಯಾಣಿಕರ ಲಗೇಜ್, ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿವೆ.

ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ