image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಬೈರತಿ ಬಸವರಾಜ್ ಸಿಐಡಿ ಪೊಲೀಸರ ವಶಕ್ಕೆ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಬೈರತಿ ಬಸವರಾಜ್ ಸಿಐಡಿ ಪೊಲೀಸರ ವಶಕ್ಕೆ

ಬೆಂಗಳೂರು : ಮಾಜಿ ಸಚಿವ ಹಾಗೂ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಪ್ರಭಾವಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ (CID) ಪೊಲೀಸರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್‌ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು.

ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ರನ್‌ವೇ ಮೇಲೆ ಲ್ಯಾಂಡ್ ಆಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆದರು. ವಿಮಾನದ ಒಳಗೆ ಹೋದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ಅವರನ್ನು ಟರ್ಮಿನಲ್ ಒಳಗಡೆಯೇ ವಶಕ್ಕೆ ಪಡೆದಿದ್ದಾರೆ. ಬೈರತಿ ಬಸವರಾಜ್ ಅವರನ್ನು ಕರೆತರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕಿಕ್ಕಿರಿದಿದ್ದ ಜನರಲ್ಲಿ ಕುತೂಹಲ ಮೂಡಿತ್ತು. ಸದ್ಯ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್ ಅವರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಕೊಲೆ ಪ್ರಕರಣದ ಆರೋಪಿಗಳೊಂದಿಗೆ ಶಾಸಕರಿಗಿದ್ದ ಸಂಬಂಧ ಹಾಗೂ ಆಸ್ತಿ ವಿವಾದದಲ್ಲಿ ಅವರ ಹಸ್ತಕ್ಷೇಪದ ಬಗ್ಗೆ ಸುದೀರ್ಘ ವಿಚಾರಣೆ ನಡೆಯಲಿದೆ. ಈ ಬಂಧನ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಸರ್ಕಾರದ ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ.

Category
ಕರಾವಳಿ ತರಂಗಿಣಿ