image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಆಧಾರವಿಲ್ಲದೇ ಎನ್​ಐಎಗೆ ವಹಿಸಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದ ಹೈಕೋರ್ಟ್

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಆಧಾರವಿಲ್ಲದೇ ಎನ್​ಐಎಗೆ ವಹಿಸಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದ ಹೈಕೋರ್ಟ್

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು, ಪ್ರಕರಣವನ್ನು ಎನ್‌ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಅಲ್ಲದೆ, ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ನಂತರವಷ್ಟೇ ತನಿಖೆಯ ಹೊಣೆಯನ್ನು ಎನ್‌ಐಎಗೆ ವಹಿಸಲಾಗಿದೆ. ಏನೂ ಆಧಾರವಿಲ್ಲದೆ ತನಿಖೆ ವರ್ಗಾವಣೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ತನಿಖೆಯನ್ನು ಎನ್‌ಐಎಗೆ ವಹಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮೊದಲಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ನಂತರ ಪ್ರಕರಣ ಎನ್‌ಐಎಗೆ ವಹಿಸಿದಾಗ ಯುಎಪಿಎ ಕಲಂಗಳನ್ನು ಸೇರಿಸಲಾಗಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಪಡೆದಿಲ್ಲ. ಆದರೆ, ಪ್ರಕರಣದಲ್ಲಿ ಯುಎಪಿಎ ರೀತಿಯ ಗಂಭೀರ ಕಾಯಿದೆ ಹೇರಲು ಯಾವುದೇ ಆಧಾರವಿಲ್ಲ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಯುಎಪಿಎ ಹೇರಲಾಗಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವ ಮುನ್ನ ವಿವೇಚನೆ ಬಳಸಿಲ್ಲ. ಹಾಗಾಗಿ ಎನ್‌ಐಎ ದಾಖಲಿಸಿರುವ ಎಫ್‌ಐಆರ್ ಅಕ್ರಮವಾಗಿದೆ. ದೇಶಾದ್ಯಂತ ಇಂತಹ ಹಲವು ಕೊಲೆಗಳು ನಡೆಯುತ್ತಿರುತ್ತವೆ. ಒಂದು ಸಮುದಾಯಕ್ಕೆ ಕಿರುಕುಳ ನೀಡುವ ಉದ್ದೇಶದಿಂದಲೇ ತನಿಖೆ ಎನ್‌ಐಎಗೆ ವಹಿಸಲಾಗಿದೆ ಎಂದು ಆರೋಪಿಸಿದ್ದರು.

Category
ಕರಾವಳಿ ತರಂಗಿಣಿ