ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ದೊಡ್ಡ ಸುದ್ದಿ ಮುನ್ನೆಲೆಗೆ ಬಂದಿದೆ. 16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಸೋಶಿಯಲ್ ಮೀಡಿಯಾ ಹಾಗೂ ಮಾದಕ ವಸ್ತುಗಳ ವ್ಯಸನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬಹುದೆಂಬ ಸುಳಿವು ದೊರೆತಿದೆ. ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಸೋಶಿಯಲ್ ಮೀಡಿಯಾ ಗೀಳು ಹೆಚ್ಚಾಗಿದೆ. ದಿನದ ಹಲವಾರು ಗಂಟೆಗಳು ಫೋನ್‌ನಲ್ಲಿ ಕಳೆಯುವುದರಿಂದ ಗೆ ಸಮಯ ಕಡಿಮೆಯಾಗುತ್ತಿದೆ. ಕೆಲವರು ಗೇಮಿಂಗ್, ರೀಲ್ಸ್ ಹಾಗೂ ಚಾಟ್‌ಗಳಲ್ಲಿ ತಲ್ಲೀನರಾಗುತ್ತಿದ್ದಾರೆ. ಇದರಿಂದ ಮಾನಸಿಕ ಒತ್ತಡ, ನಿದ್ರೆ ಕೊರತೆ ಹಾಗೂ ಅಂಕಗಳಲ್ಲಿ ಕುಸಿತ ಕಾಣಿಸುತ್ತಿದೆ. ಈ ಕಾರಣದಿಂದ ಮೊಬೈಲ್ ಬ್ಯಾನ್ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.