image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಜೂನ್ ತಿಂಗಳ ಒಳಗಾಗಿ ಸ್ಥಳೀಯ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು : ಸಿ ಎಂ ಸಿದ್ದರಾಮಯ್ಯ

ಜೂನ್ ತಿಂಗಳ ಒಳಗಾಗಿ ಸ್ಥಳೀಯ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು : ಸಿ ಎಂ ಸಿದ್ದರಾಮಯ್ಯ

ಕಾರವಾರ : ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನಲ್ಲಿ ಮಂಜಗುಣಿ - ಗಂಗಾವಳಿಸೇತುವೆಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ಕೊಟ್ಟು, ಕರ್ನಾಟಕವನ್ನು ಪ್ರಗತಿಯ ಹೊಸದಿಕ್ಕಿನಲ್ಲಿ ಮುನ್ನಡೆಸುತ್ತಿದ್ದೇವೆ ಎಂಬುದಕ್ಕೆ ಇಂದಿನ ಕಾರ್ಯಕ್ರಮವೇ ಸಾಕ್ಷಿ ಎಂದು ಹೇಳಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಮಾಜಿ ಸಚಿವರೂ, ಶಾಸಕರು ಆದ ಆರ್.ವಿ.ದೇಶಪಾಂಡೆ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿ ಹಲವು ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ