image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಲೋಕಾಯುಕ್ತ ಪೊಲೀಸರಿಂದ ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು

ಲೋಕಾಯುಕ್ತ ಪೊಲೀಸರಿಂದ ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು

ಮೈಸೂರು: ಸಿಎಂ ಹಾಗೂ ಪತ್ನಿ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಮುಂದುವರೆದಿದ್ದು, ಮೂಲ ಜಮೀನು ಸ್ಥಳಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದರು. ಈ ವೇಳೆ ಕಂದಾಯ, ಸರ್ವೇ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ಲೋಕಾಯುಕ್ತ ಪೊಲೀಸರು ಟೇಪ್‌ ಹಿಡಿದು ಅಳತೆ ಮಾಡಿ ತನಿಖೆ ಮಾಡಿದರು.

ಮುಡಾ ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಮೈಸೂರು ಲೋಕಾಯುಕ್ತ ಕರೆದ ಹಿನ್ನೆಲೆ ಬೆಳ್ಳಂಬೆಳಗ್ಗೆ 7.30ಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು. ಬಳಿಕ ಲೋಕಾ ಪೊಲೀಸರು, ಸ್ನೇಹಮಯಿ ಕೃಷ್ಣ ಅವರನ್ನು ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದರು.

ಸ್ಥಳ ಮಹಜರು ಮುನ್ನ ಮಾತನಾಡಿದ್ದ ಸ್ನೇಹಮಯಿ ಕೃಷ್ಣ, "ದಾಖಲೆಗಳಿಗೆ ಸಂಬಂಧಿಸಿದ ಯಾವುದೇ ನೋಟಿಸ್‌ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದ್ದರೆ ನಾನು ಕೊಡಲು ಸಿದ್ಧ. ಮೊದಲು ದೂರು ನೀಡಿದ ಸಂದರ್ಭ ನೀಡಿದ ದಾಖಲಾತಿಗಳನ್ನು ಈಗಾಗಲೇ ಕೊಟ್ಟಿದ್ದೇನೆ. ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ. ಇದರ ಜೊತೆಗೆ ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ನನ್ನ ಒತ್ತಾಯ" ಎಂದರು.

ಇಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಎಂ ಪತ್ನಿ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ ಸ್ನೇಹಮಯಿ ಕೃಷ್ಣ, "ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ಈವರೆಗಿನ ಎಲ್ಲಾ ಪ್ರಕರಣಗಳಲ್ಲೂ ಜಯಗಳಿಸಿದ್ದೇನೆ. ಅದೇ ರೀತಿ ಇಲ್ಲೂ ಜಯ ಗಳಿಸುವ ವಿಶ್ವಾಸವಿದೆ. ನನ್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ" ಎಂದು ಹೇಳಿದರು.

Category
ಕರಾವಳಿ ತರಂಗಿಣಿ