image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ : ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು

ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ : ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು

ಬೆಂಗಳೂರು : ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಸದ್ಯ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದ್ದು,ಕಾಂಗ್ರೆಸ್ ಶಾಸಕ ಎನ್‌ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಯಾವುದೇ ಪ್ರತಿಭಟನೆ, ಹೋರಾಟ, ಧರಣಿ ನಡೆಸುವುದಾದರೂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನವಿದೆ. ಆದರೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹಿಂದೂ ಕಾರ್ಯಕರ್ತ ತೇಜಸ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Category
ಕರಾವಳಿ ತರಂಗಿಣಿ