image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ನೀರಾನೆ ದಾಳಿಯಿಂದ ಸಾವು

ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ನೀರಾನೆ ದಾಳಿಯಿಂದ ಸಾವು

ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ಧ ತಾವರೆಕೊಪ್ಪ ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ಇವರು, ರಾತ್ರಿ 11:30ರ ಸಮಯದಲ್ಲಿ ಅನಾರೋಗ್ಯಕ್ಕೀಡಾಗಿದ್ದ ವನ್ಯಜೀವಿಗೆ ಚಿಕಿತ್ಸೆ ನೀಡಲು ಮೃಗಾಲಯದ ಆವರಣಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವನ್ಯಜೀವಿಯ ತುರ್ತು ಚಿಕಿತ್ಸೆಗಾಗಿ ತೆರಳಿದ್ದ ಸಂದರ್ಭದಲ್ಲಿ ನೀರಾನೆಯು ಏಕಾಏಕಿ ದಾಳಿ ನಡೆಸಿದ್ದು, ಡಾ. ಸಮೀಕ್ಷಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ದುರದೃಷ್ಟಕರ ಘಟನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ನಿಯಮಾನುಸಾರ ಮೃತರ ಕುಟುಂಬಕ್ಕೆ ಕೂಡಲೇ ಪರಿಹಾರ ಧನ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಹಿರಿಯ ಪಶುವೈದ್ಯರು ಮತ್ತು ಅರಣ್ಯಾಧಿಕಾರಿಗಳ ತಂಡದಿಂದ ತನಿಖೆ ನಡೆಸಿ, 7 ದಿನಗಳ ಒಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ರಾಜ್ಯದ ಎಲ್ಲಾ ಮೃಗಾಲಯಗಳ ಪಶುವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಕಡ್ಡಾಯವಾಗಿ ಪ್ರಮಾಣಿತ ಮಾನದಂಡಗಳನ್ನು (SOP) ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ