image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಾಂಗ್ರೆಸ್​ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಬಿಗ್​ ಶಾಕ್​ : ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ ಸೇರ್ಪಡೆ!

ಕಾಂಗ್ರೆಸ್​ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಬಿಗ್​ ಶಾಕ್​ : ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ ಸೇರ್ಪಡೆ!

ದಾವಣಗೆರೆ : ಉಪಚುನಾವಣೆ ಘೋಷಣೆಯಾದ ದಿನದಿಂದಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆದರೆ, ಕಾಂಗ್ರೆಸ್​ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಬಿಗ್​ ಶಾಕ್​ ಎದುರಾಗಿದೆ. ಅಲ್ಪಸಂಖ್ಯಾತ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಬಿಜೆಪಿಗೆ ಸೇರಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದೇ ಶಾಮನೂರ ಕುಟುಂಬಕ್ಕೆ ಟಿಕೆಟ್ ನೀಡಿದ ಹಿನ್ನೆಲೆ ಸುಮಾರು 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರಿರುವ ಮುಖಂಡರುಗಳು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರಿಗೆ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸೋಲಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಅಲ್ಪಸಂಖ್ಯಾತರಿಂದ ಬಿಜೆಪಿಗೆ ಸೇರ್ಪಡೆ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Category
ಕರಾವಳಿ ತರಂಗಿಣಿ