image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಪಘಾತದಲ್ಲಿ ಯಾವುದೇ ತಪ್ಪು ಇಲ್ಲದಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದು ಕಡ್ಡಾಯ : ಹೈ ಕೋರ್ಟ್

ಅಪಘಾತದಲ್ಲಿ ಯಾವುದೇ ತಪ್ಪು ಇಲ್ಲದಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದು ಕಡ್ಡಾಯ : ಹೈ ಕೋರ್ಟ್

ಬೆಂಗಳೂರು : ವಾಹನ ಅಪಘಾತದಲ್ಲಿ ಯಾವುದೇ ತಪ್ಪು ಇಲ್ಲದಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೋಟಾರು ವಾಹನ ತಿದ್ದುಪಡಿ ಕಾಯ್ದೆ-2019ರ ಸೆಕ್ಷನ್ 164 ರ ಅನ್ವಯ, ಆದಾಯದ ಮಿತಿಯ ನಿರ್ಬಂಧವಿಲ್ಲದೆ ಈ ಪರಿಹಾರ ಒದಗಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 2014ರ ಏಪ್ರಿಲ್ 17ರಂದು ರಂಜಾನ್ ಹುಸೇನ್ ಕಲ್ಲೋಳೆ ಮತ್ತು ರವಿ ಮಹದೇವ್ ಮಗದುಮ್ ಅವರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಎಮ್ಮೆ ಬಂದಿತ್ತು. ಎಮ್ಮೆಯನ್ನು ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಮೃತಪಟ್ಟಿದ್ದರು.

ಈ ಹಿಂದೆ ಮೋಟಾರು ವಾಹನ ಅಪಘಾತ ಪರಿಹಾರ ಕ್ಲೈಮು ನ್ಯಾಯಾಧಿಕರಣವು (MACT), ಮೃತ ರಂಜಾನ್ ಅವರ ವಾರ್ಷಿಕ ಆದಾಯ ₹40 ಸಾವಿರಕ್ಕಿಂತ ಹೆಚ್ಚಿದೆ ಎಂಬ ತಾಂತ್ರಿಕ ಕಾರಣ ನೀಡಿ ಪರಿಹಾರವನ್ನು ನಿರಾಕರಿಸಿತ್ತು. ಅಲ್ಲದೆ, ಸವಾರನ ಬಳಿ ಚಾಲನಾ ಪರವಾನಗಿ ಇಲ್ಲ ಎಂಬ ಕಾರಣಕ್ಕೆ ಬೈಕ್ ಮಾಲೀಕನೇ ಪರಿಹಾರ ನೀಡಬೇಕೆಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮೃತರ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠವು ಈ ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ತೀರ್ಪು ನೀಡಿದೆ.

Category
ಕರಾವಳಿ ತರಂಗಿಣಿ