image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಾವರ್ಕರ್ ರಾಷ್ಟ್ರೀಯವಾದಿ ಆಗಿದ್ದರೂ ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾಗಿದೆ : ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​

ಸಾವರ್ಕರ್ ರಾಷ್ಟ್ರೀಯವಾದಿ ಆಗಿದ್ದರೂ ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾಗಿದೆ : ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​

ಬೆಂಗಳೂರು: "ಚಿತ್ಪಾವನ್ ಬ್ರಾಹ್ಮಣ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು.‌ ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿಯೇ ಸಮರ್ಥಿಸುತ್ತಿದ್ದರು. ಅಷ್ಟೇ ಅಲ್ಲದೇ, ಅವರು ಗೋಹತ್ಯೆಯನ್ನು ವಿರೋಧಿಸುತ್ತಿರಲಿಲ್ಲ. ಹಾಗಾಗಿ, ಒಂದು ರೀತಿಯಲ್ಲಿ ಸಾವರ್ಕರ್ ಮಾಡರ್ನಿಷ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗೋಡ್ಸೆಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದೆದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು, ರಾಷ್ಟ್ರೀಯವಾದ ಕಾಣಲು ಸಾಧ್ಯವಾದರೂ, ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಇರಲಿಲ್ಲ. ಆದರೆ ಗಾಂಧೀಜಿ ಅವರದ್ದು ಡೆಮಾಕ್ರಾಟಿಕ್ ವ್ಯಕ್ತಿತ್ವ" ಎಂದರು.

ಮುಂದುವರೆದು, "ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ. ಇದು ಯುರೋಪ್​ನಿಂದ ಬಂದಿರುವಂಥದ್ದು. ಸಾವರ್ಕರ್ ಯೂರೋಪ್​ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು" ಎಂದು ತಿಳಿಸಿದರು.

"ಇಂದು ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಪ್ರದಾಯಸ್ಥರಿದ್ದಾರೆ. ಸಂಪ್ರದಾಯಸ್ಥರೆಲ್ಲ ಮೂಲಭೂತವಾದಿಗಳಲ್ಲ ಎಂಬುದನ್ನು ನಾವು ಅರಿತುಕೊಳ್ಳಬೇಕು. ಮೂಲಭೂತವಾದದ ವಿರುದ್ಧದ ಹೋರಾಟದಲ್ಲಿ ಈ ಅಂಶವನ್ನು ಅರಿತು ನಾವು ಮುಂದೆ ಸಾಗಬೇಕಿದೆ. ಈ ನಿಟ್ಟಿನಲ್ಲಿ 'ಗಾಂಧೀಜಿಯ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ' ಪುಸ್ತಕ ಗಾಂಧೀಜಿಯವರ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದೆ.

Category
ಕರಾವಳಿ ತರಂಗಿಣಿ