image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನಾನು ಹಣ ಕೊಟ್ಟು ಖರೀದಿಸಿದ ಭೂಮಿ, ಅರಿಶಿನ-ಕುಂಕುಮದಿಂದ ಬಂದಿಲ್ಲ - ಆರ್ ಅಶೋಕ್

ನಾನು ಹಣ ಕೊಟ್ಟು ಖರೀದಿಸಿದ ಭೂಮಿ, ಅರಿಶಿನ-ಕುಂಕುಮದಿಂದ ಬಂದಿಲ್ಲ - ಆರ್ ಅಶೋಕ್

ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು, ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ, ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ, ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ ಎಂದರು.

ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರೂ ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ಅಷ್ಟೇ ಅಲ್ಲದೆ ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ರಾಜ್ಯಪಾಲರು ಹಾಗೂ ನ್ಯಾಯಾಲಯವೇ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟರೆ, ಕಾಂಗ್ರೆಸ್‌ ಪಕ್ಷ ಮಾತ್ರ ಇದರಲ್ಲಿ ತೀರ್ಪು ನೀಡಲು ಮುಂದಾಗಿದೆ. ಅಂದರೆ ಕಾಂಗ್ರೆಸ್‌ ಪಕ್ಷ ತನ್ನನ್ನು 'ನ್ಯಾಯಾಲಯಕ್ಕಿಂತ ದೊಡ್ಡದು' ಎಂದುಕೊಂಡಿದೆ ಎಂದು ವ್ಯಂಗ್ಯವಾಡಿದರು.

Category
ಕರಾವಳಿ ತರಂಗಿಣಿ