image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಾಪಿ ರೈಟ್ ಉಲ್ಲಂಘನೆ : ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿ ಆದೇಶ

ಕಾಪಿ ರೈಟ್ ಉಲ್ಲಂಘನೆ : ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿ ಆದೇಶ

ಬೆಂಗಳೂರು : ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ. 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ ಅನುಮತಿ ಇಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ಗೆ 25 ಲಕ್ಷ ರೂ.ದಂಡ ವಿಧಿಸಿ ದೆಹಲಿ ಹೈಕೋರ್ಟ್ ಆದೇಶಿಸಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ಎಂ.ಆರ್.ಟಿ. ಮ್ಯೂಸಿಕ್ ದೂರು ದಾಖಲಿಸಿದ್ದು, 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿನ್ನನ್ನು' ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು. 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ ಈ ಹಾಡುಗಳನ್ನು ಅನುಮತಿ ಪಡೆಯದೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿತ್ತು.

ವಿಚಾರಣೆಯ ವೇಳೆ ರಕ್ಷಿತ್ ಶೆಟ್ಟಿ ಮತ್ತು ತಂಡ ಸಮರ್ಥನೆಯಾಗಿ ಅನೇಕ ವಾದಗಳನ್ನು ಮಂಡಿಸಿದೆ. ನ್ಯಾಯ ಎಲ್ಲಿದೆ ಹಾಡನ್ನು ಕೇವಲ 7 ಸೆಕೆಂಡ್, ಒಮ್ಮೆ ನಿನ್ನನ್ನು ಹಾಡನ್ನು 31 ಸೆಕೆಂಡ್ ಮಾತ್ರ ಬಳಕೆ ಮಾಡಲಾಗಿದ್ದು, ಇದು ಅತಿ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆ ಆಗುವುದಿಲ್ಲ ಎಂದು ವಾದಿಸಿತ್ತು. ಈ ವಾದ ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಹಾಡುಗಳ ಬಳಕೆ ಕೇವಲ ಕಾಕತಾಳೀಯವಲ್ಲ. ಸಿನಿಮಾ ಕಥೆಯ ನಿರೂಪಣೆಗೆ ಪೂರಕವಾಗಿ ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತು ಹಾಡು ಬಳಕೆ ಹಕ್ಕುಸ್ವಾಮ್ಯ ಅಡಿ ಬರುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಜೈಲು ಶಿಕ್ಷೆ ವಿಧಿಸುವುದರಿಂದ ವಿನಾಯಿತಿ ನೀಡಿದೆ. ಹಣಕಾಸಿನ ವಿಚಾರದಲ್ಲಿ ಕಾಪಿರೈಟ್ ಉಲ್ಲಂಘಿಸಿದ್ದಕ್ಕಾಗಿ 20 ಲಕ್ಷ ರೂ., ಕೋರ್ಟ್ ಆದೇಶ ಪಾಲನೆ ವಿಳಂಬಕ್ಕೆ 5 ಲಕ್ಷ ರೂ. ಸೇರಿ ಒಟ್ಟು 25 ಲಕ್ಷ ರೂ. ದಂಡ ವಿಧಿಸಲಾಗಿದೆ.

Category
ಕರಾವಳಿ ತರಂಗಿಣಿ