image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಸುರಕ್ಷಿತವಾಗಿ ಪತ್ತೆ

ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಸುರಕ್ಷಿತವಾಗಿ ಪತ್ತೆ

ಕೊಡಗು : ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ, ಮೂರು ದಿನಗಳ ಬೃಹತ್ ಶೋಧ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಅರಣ್ಯ ಇಲಾಖೆ, ಪೊಲೀಸರು, ನಕ್ಸಲ್ ನಿಗ್ರಹ ಪಡೆ ಮತ್ತು ಸ್ಥಳೀಯರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ. ಕೇರಳದ ಕೊಚ್ಚಿಯ ನಾದನಾಪುರ ಗ್ರಾಮದ ನಿವಾಸಿ, ಗೋಪಿ ಮತ್ತು ಶೈಲಜಾ ದಂಪತಿಯ ಪುತ್ರಿ ಶರಣ್ಯ ಕಳೆದ 15 ವರ್ಷಗಳಿಂದ ದೇಶದ ವಿವಿಧೆಡೆ ಚಾರಣ ಮಾಡಿದ ಅನುಭವ ಹೊಂದಿದ್ದಾರೆ. ಏಪ್ರಿಲ್ 2 ರಂದು ಅವರು ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಒಬ್ಬರೇ ಚಾರಣಕ್ಕೆ ತೆರಳಿದ್ದರು. ಚಾರಣ ಮುಗಿಸಿ ವಾಪಸ್ ಬರುವಾಗ ದಾರಿ ತಪ್ಪಿ ದಟ್ಟಾರಣ್ಯದೊಳಗೆ ಸಿಲುಕಿಕೊಂಡಿದ್ದರು.

ದಾರಿ ತಪ್ಪಿದ ವಿಷಯ ತಿಳಿಯುತ್ತಿದ್ದಂತೆಯೇ ಅವರು ತಾವು ತಂಗಿದ್ದ ಹೋಂಸ್ಟೇ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಆದರೆ, ದುರದೃಷ್ಟವಶಾತ್ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಅವರ ನಿಖರವಾದ ಲೊಕೇಶನ್ ಪತ್ತೆ ಹಚ್ಚುವುದು ಕಷ್ಟಕರವಾಗಿತ್ತು. ಶೋಧ ಕಾರ್ಯದಲ್ಲಿ ಅರಣ್ಯ ಇಲಾಖೆ, ಪೊಲೀಸರು ಮತ್ತು ಸ್ಥಳೀಯರು ಭಾಗಿಯಾಗಿದ್ದರು. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿತ್ತು. ಅಂತಿಮವಾಗಿ, ಶರಣ್ಯ ಅವರನ್ನು ದಟ್ಟ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಪತ್ತೆ ಮಾಡಲಾಯಿತು ಮತ್ತು ರಕ್ಷಣಾ ತಂಡವು ಅವರನ್ನು ಸುರಕ್ಷಿತವಾಗಿ ಕರೆತಂದಿತು.

Category
ಕರಾವಳಿ ತರಂಗಿಣಿ