image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಯಡಿಯೂರಪ್ಪ ಅವರಿಗೆ ಅರಳು ಮರಳು, ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆಂದು ಅವರೇ ಹೇಳಲಿ: ಸಿಎಂ ಸಿದ್ದರಾಮಯ್ಯ ಕಿಡಿ

ಯಡಿಯೂರಪ್ಪ ಅವರಿಗೆ ಅರಳು ಮರಳು, ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆಂದು ಅವರೇ ಹೇಳಲಿ: ಸಿಎಂ ಸಿದ್ದರಾಮಯ್ಯ ಕಿಡಿ

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಹೆಚ್. ವಿಶ್ವನಾಥ್ ಅವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನವನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿಶ್ವಾಸದ್ರೋಹಿ ಎಂಬ ಯಡಿಯೂರಪ್ಪ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದರು. "ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎನ್ನುವುದನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ಉಲ್ಲೇಖಿಸಲಿ. ವಯಸ್ಸಾದ ಕಾಲದಲ್ಲಿ ಯಡಿಯೂರಪ್ಪ ಅವರಿಗೆ ಅರಳು ಮರಳು ಶುರುವಾದಂತಿದೆ, ಅವರು ಆಧಾರರಹಿತವಾಗಿ ಮಾತನಾಡಬಾರದು" ಎಂದು ಸಿಎಂ ಟೀಕಿಸಿದರು.

ಬಾಗಲಕೋಟೆಯಲ್ಲಿ ಸ್ವಜಾತಿಯ ಅಭ್ಯರ್ಥಿ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಠಿಕಾಣಿ ಹೂಡಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, "ನಾನು ದಾವಣಗೆರೆ ದಕ್ಷಿಣದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಅಲ್ಲಿಯೇ ಬೀಡುಬಿಟ್ಟು ಪ್ರಚಾರ ಮಾಡಿದ್ದೇನೆ. ಅವರು ಯಾವ ಜಾತಿ? ನಾವು ಚುನಾವಣೆಗಳಲ್ಲಿ ಜಾತಿ ನೋಡಿ ಪ್ರಚಾರ ಮಾಡುವುದಿಲ್ಲ, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತೇವೆ" ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಪ್ರತಾಪ್ ಸಿಂಹ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಸಂಸದೀಯ ಪದಗಳ ಬಳಕೆ ಪ್ರತಾಪ್ ಸಿಂಹ ಅವರ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದರು. ಅಲ್ಲದೆ, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದ ಸಿದ್ದರಾಮಯ್ಯ, ಪ್ರಸ್ತುತ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದ್ದು, ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Category
ಕರಾವಳಿ ತರಂಗಿಣಿ