image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಮಾನ್ಯಗೊಂಡ ನೋಟುಗಳ ವಿನಿಮಯಕ್ಕೆ ಕೇಂದ್ರದ ನಿಯಮ ಅನುಸರಿಸುವುದು ಕಡ್ಡಾಯ ಎಂದ ಹೈಕೋರ್ಟ್

ಅಮಾನ್ಯಗೊಂಡ ನೋಟುಗಳ ವಿನಿಮಯಕ್ಕೆ ಕೇಂದ್ರದ ನಿಯಮ ಅನುಸರಿಸುವುದು ಕಡ್ಡಾಯ ಎಂದ ಹೈಕೋರ್ಟ್

ಬೆಂಗಳೂರು: ಅಮಾನ್ಯಗೊಂಡ ನೋಟುಗಳ ವಿಲೇವಾರಿ ಮತ್ತು ವಿನಿಮಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 2017ರಲ್ಲಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಅಧೀನ ನ್ಯಾಯಾಲಯಗಳು ಮತ್ತು ತನಿಖಾ ಸಂಸ್ಥೆಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್‌ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಲೇವಾರಿ ಮಾಡಿ ಆದೇಶಿಸಿದೆ.

2016ರ ಡಿ.30ಕ್ಕೆ ಮುನ್ನ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಅಮಾನ್ಯಗೊಂಡ ನೋಟುಗಳಿಗೆ ಕೇಂದ್ರದ ನಿಯಮ ಅನ್ವಯವಾಗಲಿದೆ. ಕೇಂದ್ರ ಸರ್ಕಾರ ಹಲವು ಷರತ್ತುಗಳೊಂದಿಗೆ 2017ರ ಮೇ 12ರಂದು ಅಮಾನ್ಯಗೊಂಡ ನೋಟುಗಳ ವಿಲೇವಾರಿ, ನ್ಯಾಯಾಲಯದಿಂದ ಬಿಡುಗಡೆ ಮತ್ತು ವಿನಿಯಮಕ್ಕೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಿದೆ. ಹಾಗಾಗಿ ತನಿಖಾ ಸಂಸ್ಥೆಗಳು ಆ ನಿಯಮಗಳನ್ನು ಕಠಿಣವಾಗಿ ಪಾಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಆರ್‌ಬಿಐ ಪರ ವಾದಿಸಿದ್ದ ವಕೀಲರು, ಅಮಾನ್ಯಗೊಂಡ ಕರೆನ್ಸಿಯನ್ನು ಕಾನೂನುಬದ್ಧ ಟೆಂಡರ್‌ನೊಂದಿಗೆ ವಿನಿಮಯ ಮಾಡಿಕೊಳ್ಳುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ. ಏಕೆಂದರೆ ಇದನ್ನು ಕೇಂದ್ರ ಸರ್ಕಾರ ಮಾತ್ರ ಪರಿಗಣಿಸಬಹುದು. ಹಾಗಾಗಿ ನ್ಯಾಯಾಲಯ, ಅರ್ಜಿದಾರರು ಬೇಕಿದ್ದರೆ ತಮ್ಮ ನೋಟುಗಳ ವಿನಿಯಮ ಸಂಬಂಧ ಕೇಂದ್ರ ಸರ್ಕಾರಕ್ಕೆ ನೇರವಾಗಿ ಮನವಿ ಸಲ್ಲಿಸಬಹುದು ಎಂದು ನಿರ್ದೇಶನ ನೀಡಿದೆ.

Category
ಕರಾವಳಿ ತರಂಗಿಣಿ