image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ದುರಂತದಲ್ಲಿ ಬಾಲಕಿ ಸಾವು: ಶಾಸಕ ಸಿ.ಟಿ. ರವಿ ಭೇಟಿ

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ದುರಂತದಲ್ಲಿ ಬಾಲಕಿ ಸಾವು: ಶಾಸಕ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕಿ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಡಾ. ಸಿ.ಟಿ. ರವಿ ಅವರು ತಕ್ಷಣವೇ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಅಪಘಾತದಲ್ಲಿ ಮೃತಪಟ್ಟ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕರು, ಈ ದುರ್ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಳಿಕ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ​ಈ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಿ.ಟಿ. ರವಿ ಅವರು, ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು. ಸದ್ಯ ಬಿಳೇಕಲ್ಲು ಗ್ರಾಮದಲ್ಲಿ ಈ ಘಟನೆಯಿಂದಾಗಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Category
ಕರಾವಳಿ ತರಂಗಿಣಿ