image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆ: ಮೇ 4 ರಂದು ಮತ ಎಣಿಕೆಗೆ ಕ್ಷಣಗಣನೆ, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆ: ಮೇ 4 ರಂದು ಮತ ಎಣಿಕೆಗೆ ಕ್ಷಣಗಣನೆ, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬಾಗಲಕೋಟೆ : ವಿಧಾನಸಭಾ ಉಪಚುನಾವಣೆಯ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಅವರು ಮಾಹಿತಿ ನೀಡಿದ್ದು, ಮೇ 4 ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಪೂರೈಸಿದ್ದು, ಅಂದು ಬೆಳಿಗ್ಗೆ 7 ಗಂಟೆಗೆ ಚುನಾವಣಾ ವೀಕ್ಷಕರು ಮತ್ತು ಅಭ್ಯರ್ಥಿಗಳ ಸಮ್ಮುಖದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ಇವಿಎಂ ಮತ ಎಣಿಕೆಗಾಗಿ ನೆಲ ಮಹಡಿಯ ಕೊಠಡಿ ಸಂಖ್ಯೆ 4ರಲ್ಲಿ 14 ಟೇಬಲ್‌ಗಳನ್ನು ಸಜ್ಜುಗೊಳಿಸಲಾಗಿದ್ದು, ಅಂಚೆ ಮತಪತ್ರಗಳ ಎಣಿಕೆ ಮತ್ತು ಇಟಿಪಿಬಿಎಸ್ ಸ್ಕ್ಯಾನಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಎಣಿಕೆ ಮೇಲ್ವಿಚಾರಕರು, ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ಒಳಗೊಂಡಂತೆ ಒಟ್ಟು 63 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳು ಮತ್ತು ಏಜೆಂಟ್ ವರ್ಗದವರು ಬೆಳಿಗ್ಗೆ 7 ಗಂಟೆಗೆ ಹಾಜರಿರಬೇಕು ಎಂದು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕೇಂದ್ರದೊಳಗೆ ಮೊಬೈಲ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಮೇ 4ರ ಬೆಳಿಗ್ಗೆ 6 ರಿಂದ ಮೇ 5ರ ಬೆಳಿಗ್ಗೆ 6 ರವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕ್ಷೇತ್ರದ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ