image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರೆಡ್ಡಿ ಬ್ರದರ್ಸ್ ವಿರುದ್ಧ ತೋಳು ತಟ್ಟಿದ ಹೋರಾಟಕ್ಕೆ ಉಗ್ರಪ್ಪರೂ ಕಾರಣ- ಸಿದ್ದರಾಮಯ್ಯ

ರೆಡ್ಡಿ ಬ್ರದರ್ಸ್ ವಿರುದ್ಧ ತೋಳು ತಟ್ಟಿದ ಹೋರಾಟಕ್ಕೆ ಉಗ್ರಪ್ಪರೂ ಕಾರಣ- ಸಿದ್ದರಾಮಯ್ಯ

ಬೆಂಗಳೂರು: ರೆಡ್ಡಿ ಬ್ರದರ್ಸ್ ವಿರುದ್ಧ ತೋಳು ತಟ್ಟಿದ ಹೋರಾಟಕ್ಕೆ ಉಗ್ರಪ್ಪರೂ ಕಾರಣ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದರು. ಅವರು ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿ, ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದರು. 

ನಾನು ಬಳ್ಳಾರಿ ಪಾದಯಾತ್ರೆ ಮಾಡುವುದಕ್ಕೂ ಮೊದಲೇ ಉಗ್ರಪ್ಪ ಗಣಿ ಹಗರಣ ಮತ್ತು ರೆಡ್ಡಿ ಬ್ರದರ್ಸ್ ವಿಚಾರದ ಬಗ್ಗೆ ಸತ್ಯ ಶೋಧನಾ ವರದಿ ನೀಡಿದ್ದರು. ಈ ವರದಿ ಬಳ್ಳಾರಿ ಪಾದಯಾತ್ರೆಗೆ ನಾನು ತೋಳು ತಟ್ಟುವಂತಾಯಿತು. ಪಾದಯಾತ್ರೆ ಯಶಸ್ವಿಗೆ ಉಗ್ರಪ್ಪ ಅವರ ಪಾತ್ರ ಕೂಡ ಪ್ರಮುಖವಾದದ್ದು ಎಂದರು. 

ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗ್ತದೆ ನಾನೂ ನೋಡ್ತೀನಿ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ಕೂಡ ರವಾನಿಸಿದರು. 

ಉಗ್ರಪ್ಪ ಮತ್ತು ಪಿ.ಜಿ.ಆರ್.ಸಿಂದ್ಯಾ ಇಬ್ಬರೂ RSS ನಲ್ಲಿದ್ದವರು. ಇಬ್ಬರಿಗೂ RSS ನ ದ್ವೇಷದ, ತಾರತಮ್ಯದ, ಜಾತಿವಾದದ ಸತ್ಯ ಗೊತ್ತಾಗಿ RSS ನಿಂದ ಹೊರಗೆ ಬಂದು ಸಾಮಾಜಿಕ ನ್ಯಾಯದ ಪರವಾಗಿ ನಿಂತಿದ್ದು, ಪ್ರಬುದ್ಧ ಜನಪರ ರಾಜಕಾರಣಿ ಎಂದರು. 

 ಈ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಮಾಜದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ