image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಂಗಳೂರಿನಲ್ಲಿ ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕ ಪತ್ತೆ: ತನಿಖೆಗೆ ಎನ್‌ಐಎ ಎಂಟ್ರಿ, ಹೈ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕ ಪತ್ತೆ: ತನಿಖೆಗೆ ಎನ್‌ಐಎ ಎಂಟ್ರಿ, ಹೈ ಅಲರ್ಟ್ ಘೋಷಣೆ

ಬೆಂಗಳೂರು: ನಗರದ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ದಳ (NIA) ಇದೀಗ ಕಣಕ್ಕಿಳಿದಿದ್ದು, ಭದ್ರತಾ ಲೋಪದ ಬಗ್ಗೆ ತೀವ್ರ ವಿಚಾರಣೆ ಆರಂಭಿಸಿದೆ.

​ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಎನ್‌ಐಎ ಅಧಿಕಾರಿಗಳ ತಂಡವು ಸ್ಫೋಟಕ ಪತ್ತೆಯಾದ ಜಾಗವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಬೆಂಗಳೂರು ದಕ್ಷಿಣ ವಿಭಾಗದ ಎಸ್ ಪಿ ಶ್ರೀನಿವಾಸ ಗೌಡ ಅವರಿಂದ ತನಿಖೆಯ ಪ್ರಾಥಮಿಕ ವರದಿಯನ್ನು ಪಡೆದಿರುವ ಅಧಿಕಾರಿಗಳು, ಪ್ರಧಾನಿಯವರ ಭದ್ರತೆಗೆ ಸಂಚು ರೂಪಿಸಲಾಗಿದೆಯೇ ಅಥವಾ ಇದರ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೇವಲ ಎನ್‌ಐಎ ಮಾತ್ರವಲ್ಲದೆ, ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW), ಕೇಂದ್ರ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ಭದ್ರತಾ ಪಡೆ (NSG) ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿವೆ.

​ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ (ADGP) ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಯಾರೋ ಉದ್ದೇಶಪೂರ್ವಕವಾಗಿಯೇ ಸ್ಫೋಟಕಗಳನ್ನು ಇಟ್ಟಿರುವ ಬಗ್ಗೆ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಸ್ಫೋಟಕ ತಯಾರಿಕೆಗೆ ಬಳಸಲಾದ ವಸ್ತುಗಳ ಮೂಲವನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಈ ಘಟನೆಯಿಂದಾಗಿ ರಾಜಧಾನಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಧಾನಿ ಸಂಚರಿಸುವ ಹಾದಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯ ನಂತರವಷ್ಟೇ ಈ ಭಾರೀ ಸಂಚಿನ ಹಿಂದಿರುವ ಕಿಡಿಗೇಡಿಗಳ ಅಸಲಿ ಮುಖ ಬಯಲಾಗಬೇಕಿದೆ.

Category
ಕರಾವಳಿ ತರಂಗಿಣಿ