image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಡಾ ಹಗರಣ ಮುಚ್ಚಿ ಹಾಕಲು ಜಾತಿ ಗಣತಿ ನಾಟಕ : ಸಿ ಎಂ ವಿರುದ್ಧ ಹೆಚ್ಡಿಕೆ ಕಿಡಿ

ಮುಡಾ ಹಗರಣ ಮುಚ್ಚಿ ಹಾಕಲು ಜಾತಿ ಗಣತಿ ನಾಟಕ : ಸಿ ಎಂ ವಿರುದ್ಧ ಹೆಚ್ಡಿಕೆ ಕಿಡಿ

ಬೆಂಗಳೂರು :ಮುಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿ ಗಣತಿಯ ವಿಚಾರವನ್ನು ಮುಂದಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು. 

ಕುಮಾರಸ್ವಾಮಿ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಪ್ರಶ್ನಿಸಿದರು.

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿ ಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Category
ಕರಾವಳಿ ತರಂಗಿಣಿ